ಕರವೇ ಹೋರಾಟಕ್ಕೆ ಬೆಂಬಲವಿದೆ

0
19
ತಂಗಡಗಿ

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ಹೋರಾಟಕ್ಕೆ ನಮ್ಮ ಬೆಂಬಲ ಇದೆ. ಆದರೆ ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು. ಆಸ್ತಿ ಪಾಸ್ತಿ ನಾಶ ಮಾಡಬಾರದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಕರವೇ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.
ವಿಕಾಸಸೌಧದಲ್ಲಿ ಮಾತನಾಡಿದ ಅವರು, ಕರವೇ ಹೋರಾಟಕ್ಕೆ ನಾನು ಬೆಂಬಲ ನೀಡುತ್ತೇನೆ. ಆದರೆ ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು. ರಾಜ್ಯದಲ್ಲಿ ಕನ್ನಡ ನಾಮಫಲಕ ಅಳವಡಿಕೆಗೆ ಕಾನೂನು ಜಾರಿ ಮಾಡುತ್ತಿದ್ದೇವೆ ಎಂದರು.

Previous articleಕೋವಿಡ್-19 ಪರಿಸ್ಥಿತಿ ನಿರ್ವಹಣೆಗೆ ಸಂಪುಟ ಉಪಸಮಿತಿ ರಚನೆ
Next articleಕನ್ನಡ ಪರ ಹೋರಾಟಗಾರರ ಮೇಲಿನ ಕೇಸ್‌ ವಾಪಸ್‌ ಪಡೆಯಿರಿ