Home ತಾಜಾ ಸುದ್ದಿ ಜಿಲ್ಲೆಗೆ ಆ್ಯಂಟಿ ಕಮ್ಯುನಲ್ ಟಾಸ್ಕ್ ಫೋರ್ಸ್ ಸ್ಥಾಪನೆಗೆ ತಿರ್ಮಾನ

ಜಿಲ್ಲೆಗೆ ಆ್ಯಂಟಿ ಕಮ್ಯುನಲ್ ಟಾಸ್ಕ್ ಫೋರ್ಸ್ ಸ್ಥಾಪನೆಗೆ ತಿರ್ಮಾನ

0
ಜಿಲ್ಲೆಗೆ ಆ್ಯಂಟಿ ಕಮ್ಯುನಲ್ ಟಾಸ್ಕ್ ಫೋರ್ಸ್ ಸ್ಥಾಪನೆಗೆ ತಿರ್ಮಾನ

ಕೋಮುಗಲಭೆ ನಿಗ್ರಹ ಪಡೆ ರಚನೆ: ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧವೂ ಕ್ರಮ

ಮಂಗಳೂರು: ಕೋಮು ಗಲಭೆಗೆ ಕಾರಣವಾಗುವ ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಕೂಡ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಭರವಸೆ ನೀಡಿದ್ದಾರೆ.
ನಗರದ ಸರ್ಕ್ಯೂಟ್ ಹೌಸ್​ನಲ್ಲಿ ನಡೆ ಮಾತನಾಡಿದ ಅವರು ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧಪಟ್ಟ 8 ಮಂದಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಇನ್ನು ಕೇರಳ ಮೂಲದ ಅಶ್ರಫ್ ಹತ್ಯೆ ಪ್ರಕರಣದಲ್ಲಿ ಈಗಾಗಲೇ 21 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಆಗಲಿದೆ. ಯಾವುದೇ ಸಮುದಾಯದವರು ಆಗಲೀ, ಕಾನೂನು ಉಲ್ಲಂಘನೆ ಮಾಡಲು ಬಿಡುವುದಿಲ್ಲ. ಇನ್ನು ಮುಂದೆ ಇಂತಹ ಘಟನೆಗಳು ಜಿಲ್ಲೆಯಲ್ಲಿ ನಡೆಯಬಾರದು. ಈ ಹಿಂದೆ ಶಾಂತಿ ಮತ್ತು ಸೌಹಾರ್ದೆಯನ್ನು ಕಾಪಾಡಲು ಪಾದಯಾತ್ರೆಯನ್ನು ನಡೆಸಿದ್ದೆವು. ಇದೀಗ ಮತ್ತೆ ಈ ಘಟನೆಗಳು ಮರುಕಳಿಸುತ್ತಿವೆ. ಇದರ ಹಿಂದೆ ಅನೇಕ ಶಕ್ತಿಗಳು ಕಾರ್ಯನಿರ್ವಹಿಸುತ್ತಿವೆ. ಇಂಥ ಶಕ್ತಿಗಳನ್ನು ಹುಟ್ಟುಹಾಕಲು ಬಿಡುವುದಿಲ್ಲ. ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸಬಾರದು ಎಂಬ ಗುರಿಯೊಂದಿಗ ಕರಾವಳಿ ಜಿಲ್ಲೆಗಳಲ್ಲಿ ಕೋಮುಗಲಭೆ ನಡೆಯುವ ನಿಟ್ಟಿನಲ್ಲಿ ಐಜಿ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ‘ಆ್ಯಂಟಿ ಕಮ್ಯುನಲ್ ಟಾಸ್ಕ್ ಫೋರ್ಸ್’ ಅನ್ನು ಸ್ಥಾಪಿಸಲಾಗುವುದು. ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್‌ನ್ನು ಮಂದಿನ ಎರಡು ವಾರಗಳಲ್ಲಿ ಮಾಡಲಾಗುವುದು. ಈ ಟಾಸ್ಕ್ ಫೋರ್ಸ್ ಪೊಲೀಸರ ಜೊತೆಗೂಡಿ ಕಾರ್ಯನಿರ್ವಹಿಸಲಿದೆ ಎಂದರು. ಇನ್ನು ಜಿಲ್ಲೆಯಲ್ಲಿ ಕಮ್ಯುನಲ್ ಭಾಷಣ ಮಾಡುತ್ತಾರೋ ಅವರ ವಿರುದ್ಧವೂ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಅಧಿಕಾರ ನೀಡಿದ್ದೇವೆ. ದಕ್ಷಿಣ ಕನ್ನಡ ಜಿಲ್ಲೆ ಮತ್ತೆ ಶಾಂತಿಯಿಂದ ಇರಬೇಕು. ಜನರೂ ಇಲ್ಲಿಗೆ ಬರಬೇಕು. ಅದಕ್ಕೆ ಬೇಕಾದ ಎಲ್ಲಾ ಕೆಲಸಗಳನ್ನು ಮಾಡ್ತೇವೆ. ಎರಡು ಜಿಲ್ಲೆಯಲ್ಲಿ ಮಾತ್ರ ಈ ಕೋಮುವಾದ ನಿಗ್ರಹ ಪಡೆ ಕೆಲಸ ಮಾಡ್ತದೆ. ಐಜಿಪಿ ನೇತೃತ್ವದಲ್ಲಿ ಕೆಲಸ ಮಾಡ್ತದೆ ಎಂದು ಸ್ಪಷ್ಟಪಡಿಸಿದರು.