ಕರಾವಳಿ ತೀರದಲ್ಲಿ ಹೈ ಆಲರ್ಟ್

0
53

ಸಂ. ಕ. ಸಮಾಚಾರ, ಮಂಗಳೂರು: ಪಾಕಿಸ್ತಾನದ ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂದೂರ್ ಯಶಸ್ವಿ ದಾಳಿ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕದ ಕರಾವಳಿ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಕಾವಲು ಪಡೆ ಪೊಲೀಸರು ಅರಬ್ಬೀ ಸಮುದ್ರದಲ್ಲಿ ತೀವ್ರ ನಿಗಾ ವಹಿಸಿದ್ದಾರೆ. ಕರಾವಳಿ ಕಾವಲು ಪಡೆ ಅಧಿಕಾರಿಗಳು ಮಂಗಳೂರಿನ ಬಂದರು ತೀರದಲ್ಲಿ ಪರಿಶೀಲನೆ ನಡೆಸಿದಿದ್ದಾರೆ. ಸಮುದ್ರ ಮಾರ್ಗದ ಮೀನುಗಾರಿಕಾ ಬೋಟ್, ಮೀನುಗಾರರನ್ನು ತಪಾಸಣೆಗೆ ಒಳಪಡಿಸಿದ್ದಾರೆ. ಆಳ ಸಮುದ್ರದಲ್ಲಾಗುವ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿಡಲಾಗಿದ್ದು ಕೋಸ್ಟ್ ಗಾರ್ಡ್ ಹಡಗುಗಳು ಗಸ್ತು ತಿರುಗುತ್ತಿದೆ. ವಿದೇಶಿ ಹಡಗುಗಳ ಮೇಲೆ ನಿಗಾ ಇರಿಸಲಾಗಿದೆ.

Previous articleವಿಜಯೋತ್ಸವಕ್ಕೆ ತಿರುಗಿದ ಬಿಜೆಪಿ ಜನಾಕ್ರೋಶ ಯಾತ್ರೆ
Next articleಆಪರೇಷನ್ ಸಿಂದೂರ್: ಪಟಾಕಿ ಸಿಡಿಸಿ ಸಂಭ್ರಮ