ಕರುನಾಡಿನ ಐತಿಹಾಸಿಕ ಕುಂಭಮೇಳ: ಫೆಬ್ರವರಿ 10 ರಿಂದ 12 ರವರೆಗೆ

0
9

ಕಾವೇರಿ, ಕಬಿನಿ ನದಿಗಳ ಪವಿತ್ರ ಸಂಗಮ ಸ್ಥಳ ಟಿ.ನರಸೀಪುರದಲ್ಲಿ ಫೆಬ್ರವರಿ 10 ರಿಂದ 12 ರವರೆಗೆ ಕುಂಭಮೇಳ

ಮೈಸೂರು: ಕರುನಾಡಿನ ಐತಿಹಾಸಿಕ ಕುಂಭಮೇಳಕ್ಕೆ ರಾಜ್ಯ ಸರ್ಕಾರದಿಂದ ₹6 ಕೋಟಿ‌ ಅನುದಾನ‌ ಬಿಡುಗಡೆ ಮಾಡಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಕರುನಾಡಿನ ಐತಿಹಾಸಿಕ ಕುಂಭಮೇಳವನ್ನು ಈ ಬಾರಿ ಅದ್ಧೂರಿಯಾಗಿ ಆಚರಿಸುವ ಸಲುವಾಗಿ ಮಹತ್ವದ ನಿರ್ಧಾರವೊಂದರಲ್ಲಿ ರಾಜ್ಯ ಸರ್ಕಾರವು ಟಿ.ನರಸೀಪುರದ ಕುಂಭಮೇಳಕ್ಕೆ ₹6 ಕೋಟಿ‌ ಅನುದಾನ‌ ಬಿಡುಗಡೆ ಮಾಡಿದೆ. ಟಿ.ನರಸೀಪುರದ ತ್ರಿವೇಣಿ ಸಂಗಮ ದಕ್ಷಿಣಕಾಶಿಯಲ್ಲಿ ನಡೆಯುವ ಕುಂಭಮೇಳ ಭಾರತೀಯರಿಗೆ ಸನಾತನ ಸಂಸ್ಕೃತಿ ಮತ್ತು ದಿವ್ಯ ಜೀವನ ಧರ್ಮವನ್ನು ಸಾರುವ ಧಾರ್ಮಿಕ ಕಾರ್ಯಕ್ರಮವಾಗಿದೆ. ಮೂರು ದಿನಗಳ ಕಾಲ ನಡೆಯುವ ಕುಂಭಮೇಳಕ್ಕೆ ಕರ್ನಾಟಕ ಮಾತ್ರವಲ್ಲ ಹೊರ ರಾಜ್ಯಗಳಿಂದಲೂ ಭಕ್ತರು, ಪ್ರವಾಸಿಗರು ಆಗಮಿಸುವುದಿಂದ ನರಸೀಪುರ ಪಟ್ಟಣದಲ್ಲಿಯೇ ಸಕಲ ಸೌಲಭ್ಯಗಳನ್ನು ಕಲ್ಪಿಸಲು ತಯಾರಿ ಮಾಡಿಕೊಳ್ಳಲು ಈ‌ ಅನುದಾನ ಬಳಸಿಕೊಳ್ಳಲಾಗುವುದು ಎಂದಿದ್ದಾರೆ.

ಫೆಬ್ರವರಿ 10 ರಿಂದ 12 ರವರೆಗೆ ಕುಂಭಮೇಳ : ಕಾವೇರಿ, ಕಬಿನಿ ನದಿಗಳ ಪವಿತ್ರ ಸಂಗಮ ಸ್ಥಳವಾದ ಮೈಸೂರು ಜಿಲ್ಲೆಯ ತಿರುಮಕೂಡಲು ನರಸೀಪುರದಲ್ಲಿ ಫೆಬ್ರವರಿ 10 ರಿಂದ 12 ರವರೆಗೆ ಕುಂಭಮೇಳ 2025 ನಡೆಯಲಿದ್ದು. ಮೂರು ದಿನಗಳ ಕಾಲ ನಡೆಯುವ ಕುಂಭಮೇಳಕ್ಕೆ ಕರ್ನಾಟಕ ಮಾತ್ರವಲ್ಲದೇ ಹೊರ ರಾಜ್ಯಗಳಿಂದಲೂ ಭಕ್ತರು, ಪ್ರವಾಸಿಗರು ಆಗಮಿಸುವುದಿಂದ ನರಸೀಪುರ ಪಟ್ಟಣದಲ್ಲಿಯೇ ಸಕಲ ಸೌಲಭ್ಯಗಳನ್ನು ಕಲ್ಪಿಸಲು ತಯಾರಿ ಮಾಡಲಾಗುತ್ತಿದೆ. ಕಾವೇರಿ ಹಾಗೂ ಕಬಿನಿ ನದಿಗಳು ಗುಂಜಾನರಸಿಂಹಸ್ವಾಮಿ ದೇವಸ್ಥಾನ ಸಮೀಪದಲ್ಲಿಯೇ ಸಂಗಮವಾಗುವ ಸ್ಥಳದಲ್ಲಿ ಫೆಬ್ರವರಿ 11 ರಂದು ಕಾವೇರಿ ಆರತಿಯನ್ನು ಆಯೋಜಿಸಿಲಾಗಿದೆ. ಕಳೆದ ಮೂರೂವರೆ ದಶಕದಿಂದಲೂ ಮೂರು ವರ್ಷಗಳಿಗೊಮ್ಮೆ ಕುಂಭಮೇಳವನ್ನು ತಿನರಸೀಪುರದಲ್ಲಿ ಆಯೋಜಿಸಿಕೊಂಡು ಬರಲಾಗುತ್ತಿದೆ. ಮೂರು ವರ್ಷದ ಹಿಂದೆ ಕೋವಿಡ್ ಉಲ್ಬಣಗೊಂಡಿದ್ದರಿಂದ ಸರಳವಾಗಿ ಕುಂಭಮೇಳ ಆಯೋಜಿಸಲಾಗಿತ್ತು. ಈ ಬಾರಿ ವಿಜೃಂಭಣೆಯಿಂದಲೇ ಆಚರಿಸಲು ಸಿದ್ಧತೆ ನಡೆದಿದೆ.

Previous articleಪ್ರಾಣ ಹಾನಿಯಾದಾಗ ಎಷ್ಟೇ ಪರಿಹಾರ ಕೊಟ್ಟರು ಕುಟುಂಬಕ್ಕೆ ನೆಮ್ಮದಿ ಸಿಗಲು ಸಾಧ್ಯವಿಲ್ಲ
Next article​ಪ್ರಯಾಗ್‌ರಾಜ್‌ ಕುಂಭಮೇಳದಲ್ಲಿ ಪ್ರಧಾನಿ ಮೋದಿ