SK Home Ad
Home ತಾಜಾ ಸುದ್ದಿ ಕರ್ನಾಟಕದಲ್ಲಿ 2 ಹಂತದ ಮತದಾನ

ಕರ್ನಾಟಕದಲ್ಲಿ 2 ಹಂತದ ಮತದಾನ

0
115

ನವದೆಹಲಿ: ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.
ದೆಹಲಿಯ ವಿಜ್ಞಾನ ಭವನದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವಕುಮಾರ, ದಕ್ಷಿಣ ಕರ್ನಾಟಕದ 14 ಕ್ಷೇತ್ರಗಳಲ್ಲಿ ಏಪ್ರಿಲ್‌ 26ಕ್ಕೆ ಮತದಾನ ನಡೆಯಲಿದ್ದು, ಮೇ 7ಕ್ಕೆ 2ನೇ ಹಂತದಲ್ಲಿ ಉತ್ತರ ಕರ್ನಾಟಕದ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಜೂನ್‌ 4ರಂದು ದೇಶಾದ್ಯಂತ ಏಕಕಾಲಕ್ಕೆ ಮತ ಎಣಿಕೆ ನಡೆಯಲಿದೆ ಎಂದು ಅವರು ತಿಳಿಸಿದರು.

ಮೊದಲ ಹಂತದಲ್ಲಿ: ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ

2ನೇ ಹಂತದ ಚುನಾವಣೆ: ಶಿವಮೊಗ್ಗ, ದಾವಣಗೆರೆ, ಹಾವೇರಿ, ಉತ್ತರ ಕನ್ನಡ, ಬಳ್ಳಾರಿ, ರಾಯಚೂರು, ಬಿಜಾಪುರ, ಕಲಬುರಗಿ, ಬೀದರ, ಧಾರವಾಡ, ಕೊಪ್ಪಳ, ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ,