ಕಾವೇರಿ, ಕಪಿಲಾ ಹಾಗೂ ಸ್ಫಟಿಕ ಸರೋವರಗಳು ಸೇರುವ ತ್ರಿವೇಣಿ ಸಂಗಮ
ಬೆಂಗಳೂರು: ಆರು ವರ್ಷಗಳ ನಂತರ ನಡೆಯುತ್ತಿರುವ ಕುಂಭಮೇಳದಲ್ಲಿ ಪಾಲ್ಗೊಳ್ಳುತ್ತಿರುವ ಸಕಲ ಭಕ್ತರಿಗೆ ಶುಭಾಶಯಗಳನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕೋರಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಮೈಸೂರು ಜಿಲ್ಲೆಯ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಇಂದಿನಿಂದ 3 ದಿನಗಳ ಕಾಲ 13ನೇ ಕುಂಭಮೇಳ ನಡೆಯಲಿದೆ. ಕಾವೇರಿ, ಕಪಿಲಾ ಹಾಗೂ ಸ್ಫಟಿಕ ಸರೋವರಗಳು ಸೇರುವ ಈ ತ್ರಿವೇಣಿ ಸಂಗಮದಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸಲಿದ್ದಾರೆ. ಆರು ವರ್ಷಗಳ ನಂತರ ನಡೆಯುತ್ತಿರುವ ಕುಂಭಮೇಳದಲ್ಲಿ ಫೆ. 12ರಂದು ಪವಿತ್ರ ಕುಂಭಸ್ನಾನ ನಡೆಯಲಿದೆ. ಈ ಕರ್ನಾಟಕದ ಕುಂಭಮೇಳ ದಕ್ಷಿಣ ಭಾರತದ ಕುಂಭಮೇಳವೆಂದು ಖ್ಯಾತಿ ಹೊಂದಿದ್ದು, ಇದರಲ್ಲಿ ಪಾಲ್ಗೊಳ್ಳುತ್ತಿರುವ ಸಕಲ ಭಕ್ತರಿಗೆ ಶುಭಾಶಯಗಳು ಮತ್ತು ಕುಂಭಮೇಳ ಯಶಸ್ವಿಯಾಗಲಿ ಎಂದು ನಾನು ಹಾರೈಸುತ್ತೇನೆ ಎಂದಿದ್ದಾರೆ.