ಕರ್ನಾಟಕ ಬಂದ್: ದಕ್ಷಿಣ ಕನ್ನಡದಲ್ಲಿ ಬೆಂಬಲ ಇಲ್ಲ

0
33

ಮಂಗಳೂರು: ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟಿಕೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಲವು ಕನ್ನಡ ಪರ ಸಂಘಟನೆಗಳು ಶನಿವಾರ(ಮಾ.೨೨) ರಂದು ರಾಜ್ಯ ಬಂದ್‌ಗೆ ನೀಡಿರುವ ಕರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಂಬಲ ಇಲ್ಲ. ಜಿಲ್ಲೆಯ ಕನ್ನಡ ಪರ ಸೇರಿದಂತೆ ಯಾವುದೇ ಸಂಘಟನೆಗಳು ಬಂದ್‌ನ್ನು ಬೆಂಬಲಿಸಿಲ್ಲ. ಬಸ್ ಮಾಲಕರ ಸಂಘ ಹಾಗೂ ಕೆನರಾ ಬಸ್ ಮಾಲಕರ ಸಂಘ ಬಂದ್‌ಗೆ ಸ್ಪಂದಿಸುವುದಿಲ್ಲ ಎಂದು ತಿಳಿಸಿದೆ.
ಎಲ್ಲ ಸಂಘಟನೆಗಳ ಬೇಡಿಕೆಗೆ ನಮ್ಮ ಸಹಮತ, ಸಹಾನುಭೂತಿ ಇದೆ. ಬಸ್ ಮಾಲಕರು ಕೂಡ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ, ಶನಿವಾರ ಬಸ್ ಬಂದ್ ಮಾಡುವುದಿಲ್ಲ. ಇತರ ಸಾಮಾನ್ಯ ದಿನಗಳಂತೆ ಬಸ್‌ಗಳು ಓಡಾಡಲಿವೆ. ಸಾರ್ವಜನಿಕರ ಹಿತದೃಷ್ಟಿ, ಮುಖ್ಯವಾಗಿ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಸ್ ಬಂದ್ ಮಾಡುವುದಿಲ್ಲ ಎಂದು ದ.ಕ ಬಸ್ ಮಾಲಕರ ಸಂಘದ ಅಧ್ಯಕ್ಷ ಅಝೀಜ್ ಪರ್ತಿಪಾಡಿ ತಿಳಿಸಿದ್ದಾರೆ.
ಬಸ್ ಬಂದ್‌ಗೆ ಯಾವುದೇ ಸಂಘಟನೆಗಳು ನಮ್ಮನ್ನು ಕೇಳಿಕೊಂಡಿಲ್ಲ. ಸಾರ್ವಜನಿಕರಿಗೆ ಸಮಸ್ಯೆಯಾಗುವ ಕಾರಣದಿಂದ ಬಂದ್ ಮಾಡುವುದು ಕೂಡ ಇಲ್ಲ ಎಂದು ಕೆನರಾ ಬಸ್ ಮಾಲಕರ ಸಂಘದ ಅಧ್ಯಕ್ಷ ರಾಜವರ್ಮ ಬಳ್ಳಾಲ್ ತಿಳಿಸಿದ್ದಾರೆ. ಆದ್ದರಿಂದ ದ.ಕ. ಜಿಲ್ಲೆಯಲ್ಲಿ ನಾಳೆ ಜನಜೀವನ ಎಂದಿನಂತಿರಲಿದೆ.

Previous articleಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ಘೋಷಣೆ ಮಾಡಿ
Next articleರೈತನ ಮಗಳ ಮುಡಿಗೆ 15 ಬಂಗಾರದ ಪದಕ