ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
ಉಡುಪಿ: 2024ನೇ ಸಾಲಿನ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಪ್ರಶಸ್ತಿಗಳು ಪ್ರಕಟವಾಗಿದೆ.
ನಗರದ ಪ್ರೆಸ್ ಕ್ಲಬ್ನಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡಮಿಯ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಈ ವಿಷಯ ಪ್ರಕಟಿಸಿದರು. ಪಾರ್ತಿಸುಬ್ಬ ಪ್ರಶಸ್ತಿಗೆ ಹಿಮ್ಮೇಳ ವಾದಕ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆಯಾಗಿದ್ದಾರೆ .ತೆಂಕುತಿಟ್ಟಿನ ಪ್ರಸಿದ್ಧ ಹಿಮ್ಮೇಳ ವಾದಕರೂ, ಯಕ್ಷಗಾನ ಗುರುಗಳೂ ಆದ ಬಂಟ್ವಾಳದ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರು ಕರ್ನಾಟಕ ಯಕ್ಷಗಾನ ಅಕಾಡಮಿ ನೀಡುವ 2024ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಈ ಸಾಲಿನ ಅಕಾಡಮಿಯ ಯಕ್ಷಸಿರಿ ವಾರ್ಷಿಕ ಪ್ರಶಸ್ತಿ ಹಾಗೂ ದತ್ತಿನಿಧಿ ಪ್ರಶಸ್ತಿಗೆ ಯಕ್ಷಗಾನ ಕಲಾವಿದರು ಹಾಗೂ ವಿದ್ವಾಂಸರ ಹೆಸರುಗಳನ್ನು ಅವರು ಪ್ರಕಟಿಸಿದೆ, ಪ್ರಶಸ್ತಿ ಪ್ರದಾನ ಬರುವ ಫೆ.16ರಂದು ಉಡುಪಿಯ ಕಲಾರಂಗದ ಸಭಾಂಗಣದಲ್ಲಿ ನಡೆಯಲಿದೆ.