Home ತಾಜಾ ಸುದ್ದಿ ಕರ್ನಾಟಕ ವಿಧಾನ ಪರಿಷತ್‌: 6 ಸ್ಥಾನಗಳಿಗೆ ಚುನಾವಣೆ ಘೋಷಣೆ

ಕರ್ನಾಟಕ ವಿಧಾನ ಪರಿಷತ್‌: 6 ಸ್ಥಾನಗಳಿಗೆ ಚುನಾವಣೆ ಘೋಷಣೆ

0

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕದ ವಿಧಾನಪರಿಷತ್​ನ ಆರು ಸ್ಥಾನಗಳಿಗೆ ಗುರುವಾರ ಚುನಾವಣಾ ದಿನಾಂಕ ಘೋಷಿಸಿದೆ.
ಚುನಾವಣಾ ಆಯೋಗ ರಾಜ್ಯದ ಮೂರು ಶಿಕ್ಷಕರ ಕ್ಷೇತ್ರಗಳಿಗೆ ಮತ್ತು ಮೂರು ಪದವೀಧರ ಕ್ಷೇತ್ರಗಳಿಗೆ ಚುನಾವಣೆ ಘೋಷಿಸಿದ್ದು, ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ ಮತ್ತು ಜೂನ್ 6ರಂದು ಫಲಿತಾಂಶ ಪ್ರಕಟವಾಗಲಿದೆ.
ಈಶಾನ್ಯ ಪದವೀಧರ, ನೈಋತ್ಯ ಪದವೀಧರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಮೇ 16 ಕೊ‌ನೆಯ ದಿನವಾಗಿದ್ದು. ನಾಮಪತ್ರ ಹಿಂಪಡೆಯಲು ಮೇ 20 ಕೊನೆಯ ದಿನವಾಗಿದೆ.

Exit mobile version