ಇಳಕಲ್: ಕ್ರೀಡಾ ಪಾಧಿಕಾರದ ಅಧ್ಯಕ್ಷ ಸ್ಥಾನ ನಿರಾಕರಿಸಿದ್ದ ಶಾಸಕ ವಿಜಯಾನಂದ ಕಾಶಪ್ಪನವರ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ವೀರಶೈವ ಲಿಂಗಾಯತ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.
ಈ ಬಗ್ಗೆ ಟಿಪ್ಪಣಿಯನ್ನು ನೀಡಿರುವ ಮುಖ್ಯಮಂತ್ರಿಗಳು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಅವರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ವೀರಶೈವ ಲಿಂಗಾಯತ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ ಎಂದು ಪ್ರಕಟಿಸಿದ್ದಾರೆ.