ಕರ್ನಾಟಕ ಸುವರ್ಣ ಸಂಭ್ರಮ ರಥಕ್ಕೆ ಸುಳ್ಯದಲ್ಲಿ ಸ್ವಾಗತ

0
16

ಸುಳ್ಯ:ರಾಜ್ಯವು ಕರ್ನಾಟಕವೆಂದು ನಾಮಕರಣಗೊಂಡು 5 ದಶಕಗಳು ಪೂರೈಸಿದ ಹಿನ್ನೆಲೆಯಲ್ಲಿ ಪ್ರಯಾಣಿಸುವ ‘ಕರ್ನಾಟಕ ಸುವರ್ಣ ಸಂಭ್ರಮ ರಥ’ವನ್ನು ಸುಳ್ಯದ ಶಾಸ್ತ್ರಿ ವೃತ್ತದಲ್ಲಿ ಬರಮಾಡಿಕೊಳ್ಳಲಾಯಿತು.
ಗಣ್ಯರು ತಾಯಿ ನಾಡದೇವಿ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡಿ ಅದ್ಧೂರಿಯಾಗಿ ಸ್ವಾಗತಿಸಿದರು. ಕರ್ನಾಟಕ ರಾಜ್ಯವೆಂದು ನಾಮಕರಣವಾಗಿ 50 ವರ್ಷ ಪೂರ್ಣಗೊಂಡ ಹಿನ್ನೆಲೆ ಸುವರ್ಣ ಸಂಭ್ರಮ ರಥಯಾತ್ರೆಯನ್ನು ರಾಜ್ಯದ್ಯಾಂತ ಹಮ್ಮಿಕೊಳ್ಳಲಾಗಿದೆ.
ಸುಳ್ಯ ತಹಶಿಲ್ದಾರ್ ಅರವಿಂದ್ ಕೆ.ಎಂ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ‌ ಅಧಿಕಾರಿ ರಾಜಣ್ಣ, ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ ಎಂ.ಎಚ್, ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲು ಮತ್ತಿತರರು ಹಾರಾರ್ಪಣೆ ಮಾಡಿ, ಪುಷ್ಪಾರ್ಚನೆ ಮಾಡಿದರು. ವಿವಿಧ ಇಲಾಖೆಗಳ ಅಧಿಕಾರಿಗಳು, ಕಸಾಪ ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಶಾಸ್ತ್ರೀ ವೃತ್ತದಿಂದ ಗಾಂಧಿನಗರ ತನಕ ರಥ ಸಂಚರಿಸಿತು.

Previous articleಯತ್ನಾಳ್ ಹೇಳಿಕೆಯಿಂದ ಮುಜುಗರ ಆಗಿರುವುದು ಸತ್ಯ
Next articleನಗರವು ಬಯಲು ಶೌಚ ಮುಕ್ತವಾಗುವತ್ತ ಮಹತ್ವದ ಹೆಜ್ಜೆ