ಕಲಬುರಗಿ: ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್, ಗ್ಯಾಂಗ್ ವಿರುದ್ಧ ಕಲಬುರಗಿಯಲ್ಲಿ ಕೊನೆಗೂ ಎಫ್ಐಆರ್ ದಾಖಲಾಗಿದೆ.
ಮೂವರು ಬಿಜೆಪಿ ನಾಯಕರ ಹತ್ಯೆಗೆ ಸಂಚು ರೂಪಿಸಿರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ, ಕಲಬುರಗಿಯಲ್ಲಿ ಬಿಜೆಪಿ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಸರಕಾರದ ಕುಮ್ಮಕ್ಕಿನಿಂದ ಆರೋಪಿಗಳು ಬಚಾವಾಗುತ್ತಿದ್ದಾರೆ, ಅವರನ್ನು ರಕ್ಷಿಸುವ ಭರದಲ್ಲಿ ಉಸ್ತುವಾರಿ ಸಚಿವರು ಪ್ರಕರಣಗಳನ್ನು ದಾಖಲಿಸದಂತೆ ಪೊಲೀಸರಿಗೆ ಸೂಚನೆಗಳು ನೀಡುತ್ತಿದ್ದಾರೆಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಹತ್ಯೆಗೆ ಸಂಚು ರೂಪಿಸಿರುವ ಆರೋಪಿಗಳನ್ನು ಬಂಧಿಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕುʼ ಎಂದು ಒತ್ತಾಯಿಸಿದ್ದರು, ಬೀದರ್ನಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಸಂಬಂಧ ಕೊನೆಗೂ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಮತ್ತು ಗ್ಯಾಂಗ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇದೀಗ ರಾಜು ನಂದಕುಮಾರ್, ನಾಗಭುಜಂಗೆ ಸೇರಿದಂತೆ ಆರು ಜನರ ವಿರುದ್ಧ ಬಿಎನ್ಎಸ್ ಸೆಕ್ಷನ್ 351 (2) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.