Home ಅಪರಾಧ ಕಲಬುರಗಿಯಲ್ಲಿ ರೌಡಿಶೀಟರ್ ಬರ್ಬರ ಹತ್ಯೆ

ಕಲಬುರಗಿಯಲ್ಲಿ ರೌಡಿಶೀಟರ್ ಬರ್ಬರ ಹತ್ಯೆ

0

ಕಲಬುರಗಿ: ಮಾರಾಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಗಳವಾರ ತಡರಾತ್ರಿ
ಜಿಲ್ಲೆಯ ಆಳಂದ‌ ತಾಲ್ಲೂಕಿನ ಸಾವಳೇಶ್ವರ ಕ್ರಾಸ್ ಬಳಿ ನಡೆದಿದೆ.

ಸುಧಾಕರ್‌ (32) ಕೊಲೆಯಾದ ರೌಡಿ ಶೀಟರ್ ಎಂದು ತಿಳಿದು ಬಂದಿದೆ.

ಮಂಗಳವಾರ ತಡರಾತ್ರಿ ಸಹೋದರನ ಜೊತೆ ಬೈಕ್ ಮೇಲೆ ತೆರಳುವಾಗ ದುಷ್ಕರ್ಮಿಗಳು ದಾಳಿ ನಡೆಸಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಘಟನೆಯಲ್ಲಿ ಸುಧಾಕರನ ಸಹೋದರನಿಗೆ ಗಂಭೀರ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹಳೆ ವೈಷಮ್ಯ ಹಿನ್ನೆಲೆ ಕೊಲೆ ಮಾಡಿರುವ ಶಂಕೆ ಪೊಲೀಸರು ವ್ಯಕ್ತಪಡಿಸಿದ್ದಾರೆ.

ಘಟನೆ ಸ್ಥಳಕ್ಕೆ ಆಳಂದ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ.

Exit mobile version