Home ನಮ್ಮ ಜಿಲ್ಲೆ ಕಲಬುರಗಿ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಶವವಿಟ್ಟು ಪ್ರತಿಭಟನೆ

ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಶವವಿಟ್ಟು ಪ್ರತಿಭಟನೆ

0

ಕಲಬುರಗಿ:

ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಹರಕಂಚಿ ಗ್ರಾಮದ ದಲಿತ ಸಮುದಾಯಕ್ಕೆ ಸೇರಿದ ಜಗದೇವಪ್ಪ ಎಂಬುವರ ಶವವನ್ನು ಜಿಲ್ಲಾಧಿಕಾರಿ ಕಚೇರಿ ಎದುರು ಇಟ್ಟು ದಲಿತ ಸೇನೆ ರಾಜ್ಯ ಅಧ್ಯಕ್ಷ ಹಣಮಂತ ಯಳಸಂಗಿ ನೇತೃತ್ವದಲ್ಲಿ ಕಾರ್ಯಕರ್ತರು‌ ಮಿಂಚಿನ
ಪ್ರತಿಭಟನೆ ನಡೆಸಿದರು.

ಕಳೆದ ಅಕ್ಟೋಬರ್ 27 ರಂದು ಹರಕಂಚಿ ಗ್ರಾಮದಲ್ಲಿ ಸಂದಲ್ ನಡೆಯುವ ವೇಳೆ ಗಲಾಟೆ ನಡದಿತ್ರು.

ಗಲಾಟೆಯಲ್ಲಿ ಗಂಭಿರವಾಗಿ ಗಾಯಗೊಂಡಿದ್ದ ಜಗದೇವಪ್ಪ ಕಳೆದ 18 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಈಗಾಗಲೇ ಹಲ್ಲೆ ಪ್ರಕರಣದಲ್ಲಿ 3 ಜನ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

ಇನ್ನು 4 ಜನ ರೌಡಿಶೀಟರ್ ಗಳನ್ನ ಬಂಧಿಸುವಲ್ಲಿ ಪೊಲೀಸರು ವಿಫಲವಾಗಿದ್ದಾರೆ ಎಂದು ಪೊಲೀಸರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು.

ಮೃತ ಜಗದೇವಪ್ಪ ಕುಟುಂಬಕ್ಕೆ ಪರಿಹಾರ ಮಾಡುವಂತೆ ಆಗ್ರಹಿಸಿದರು. ಮೃತನ ಕುಟುಂಬಕ್ಕೆ ಸರ್ಕಾರಿ ನೌಕರಿ ನೀಡಬೇಕು. ಅಟ್ರಾಸಿಟಿ‌ ಕಾಯ್ದೆ ಅಡಿ ದೂರು ದಾಖಲಿಸಬೇಕು. ಮಹಾಗಾವ ಠಾಣೆ ಎಸ್ ಐ ಅವರನ್ನು ಅಮಾನತು ಮಾಡಬೇಕು ಎಂದು ಪಟ್ಟುಹಿಡಿದರು.

Exit mobile version