ಕಲಬುರಗಿ: ನಗರದಲ್ಲಿ ರೈಲ್ವೆ ವಿಭಾಗೀಯ ಕೇಂದ್ರ ಸ್ಥಾಪನೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಲಬುರಗಿ ರೈಲ್ವೆ ನಿಲ್ದಾಣಕ್ಕೆ ಕಲ್ಯಾಣ ಕರ್ನಾಟಕ ಚೇಂಬರ್ ಆಫ್ ಕಾಮಾರ್ಸ್ ವತಿಯಿಂದ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಶುಕ್ರವಾರ ನಡೆದಿದೆ.
ಇನ್ನೂ ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದವರನ್ನು ಪೊಲೀಸರು ತಡೆದಿದ್ದಾರೆ.
ಕಳೆದೊಂದು ದಶಕದಿಂದ ಕಲಬುರಗಿಯಲ್ಲಿ ರೈಲ್ವೆ ವಿಭಾಗೀಯ ಕೇಂದ್ರ ಸ್ಥಾಪಿಸುವಂತೆ ಒತ್ತಾಯಿಸುತ್ತ ಬಂದರೂ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ. ಈ ಹಿಂದೆ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸಚಿವರಾಗಿದ್ದಾಗ ರೈಲ್ವೆ ವಿಭಾಗೀಯ ಕೇಂದ್ರ ಸ್ಥಾಪನೆ ಮಾಡಲು ಸಾಕಷ್ಟು ಶ್ರಮಿಸಿದ್ದರು. ಈಗ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ಭಾಗವನ್ನು ನಿರ್ಲಕ್ಷ್ಯ ಮಾಡುತಿದ್ದು, ಕೂಡಲೇ ಕೇಂದ್ರ ಸರ್ಕಾರ ರೈಲ್ವೆ ವಿಭಾಗೀಯ ಕೇಂದ್ರ ಸ್ಥಾಪಿಸುವಂತೆ ಆಗ್ರಹಿಸಿ ನಿಲ್ದಾಣ ವ್ಯವಸ್ಥಾಪಕರ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
