ಕಲಬುರಗಿ: ವಾಟಾಳ್ ನಾಗರಾಜ್ ಅವರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಕಲಬುರಗಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಎಂದಿನಂತೆ ಬಸ್, ಆಟೋ ಇತರ ವಾಹನಗಳ ಸಂಚಾರ ಇತ್ತು. ಶಾಲಾ-ಕಾಲೇಜುಗಳು, ಅಂಗಡಿ ಮುಂಗಟ್ಟುಗಳು ತೆರೆದಿರುವುದು ಕಂಡು ಬಂತು.
ಯಾವುದೇ ಕನ್ನಡಪರ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿ ಹೋರಾಟ ಮಾಡುವುದಾಗಲಿ ಜಿಲ್ಲಾಧಿಕಾರಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸುವುದಾಗಲಿ ಮಾಡಿಲ್ಲ. ಹಲವಾರು ಕನ್ನಡ ಪರ ಸಂಘಟನೆಗಳು ವಾಟಾಳ್ ನಾಗರಾಜ್ ಅವರ ಕರ್ನಾಟಕ ಬಂದ್‌ಗೆ ವಿರೋಧ ವ್ಯಕ್ತಪಡಿಸಿದ್ದಾರೆ.