ಕಲುಷಿತ ನೀರು ಕುಡಿದು 41 ಜನ ಅಸ್ವಸ್ಥ

0
10

ಬೆಳಗಾವಿ: ಸವದತ್ತಿ ತಾಲ್ಲೂಕಿನ ಚಚಡಿ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಆರಂಭವಾದ ವಾಂತಿ ಭೇದಿ ಉಲ್ಬಣಗೊಂಡಿದೆ. ಒಂದೇ ದಿನ ೪೧ ಮಂದಿಗೆ ವಾಂತಿ-ಭೇದಿ ಕಾಣಿಸಿಕೊಂಡಿದೆ.
ತೀವ್ರ ಅಸ್ವಸ್ಥರಾದ ಮೂವರನ್ನ ಬೆಳಗಾವಿ ಜಿಲ್ಲಾಸ್ಪತ್ರೆಗೆ, ಮೂವರನ್ನು ಬೈಲಹೊಂಗಲ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ನಿತ್ರಾಣಗೊಂಡಿರುವ ಈರವ್ವ ಗಾಳಿಮಠ(೬೩) ಅವರನ್ನು ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ಸೇರಿಸಲಾಗಿದೆ. ಇನ್ನಿಬ್ಬರು ಒಳರೋಗಿಗಳಾಗಿ ದಾಖಲಾಗಿದ್ದಾರೆ. ಉಳಿದವರು ಚಚಡಿ ಹಾಗೂ ಇಂಚಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲ ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಷಯ ತಿಳಿದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ ಕೋಣಿ ಭೇಟಿ ನೀಡಿ ತುರ್ತು ಚಿಕಿತ್ಸೆಯ ವ್ಯವಸ್ಥೆ ಮಾಡಿದರು. ಕಲುಷಿತ ನೀರು ಸೇವನೆಯಿಂದ ವಾಂತಿ ಭೇದಿ ಕಾಣಿಸಿಕೊಂಡಿದೆ. ಪ್ರಾಣಾಪಾಯ ಆಗಿಲ್ಲ. ನಿತ್ರಾಣಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿಕೊಂಡು ಚಿಕಿತ್ಸೆ ಮುಂದುವರಿಸಲಾಗಿದೆ. ಗ್ರಾಮದಲ್ಲಿ ನಾಲ್ವರು ವೈದ್ಯರು ಹಾಗೂ ಹಲವು ವೈದ್ಯಕೀಯ ಸಿಬ್ಬಂದಿ ಸ್ಥಳದಲ್ಲೇ ಇದ್ದಾರೆ. ನೀರನ್ನು ಕುದಿಸಿ ೯೦% ಕುಡಿಯುವಂತೆ ಜಾಗೃತಿ ವಹಿಸಲಾಗಿದೆ. ಸವದತ್ತಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಯಶವಂತ ಕುಮಾರ್ ಮಾತನಾಡಿ, ಸಮಸ್ಯೆ ಉಲ್ಬಣವಾಗುತ್ತಿದ್ದಂತೆ ಎಚ್ಚರಿಕೆ ಕ್ರಮವಹಿಸಲಾಗಿದೆ. ಬೋರ್‌ವೆಲ್‌ಗಳ ಗ್ರಾಮದ ನೀರನ್ನು ತಪಾಸಣೆಗೆ ಕಳಿಸಲಾಗಿದೆ. ಗ್ರಾಮಕ್ಕೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲಾಗಿದೆ. ಓವರ್‌ಹೆಡ್ ಟ್ಯಾಂಕಿನಿಂದ ನೀರು ಸ್ಥಗಿತ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Previous articleಸಿಲಿಂಡರ್ ಸ್ಫೋಟ: ಸಾಮಗ್ರಿ ನಾಶ
Next articleಬುರ್ಖಾ ಧರಿಸಿ ಬಂದಿದ್ದ ಯುವಕನಿಗೆ ಗೂಸಾ