ಕಲ್ಲೂರು ಘಟನೆ: ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಸಾವು

0
13

ರಾಯಚೂರು: ವಿಷಾಹಾರ ಸೇವಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಆಗಸ್ಟ್ ೧ರಂದು ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ನಡೆದಿದ್ದು, ಅದೇ ಕುಟುಂಬದ ಮತ್ತೋರ್ವ ಯುವತಿ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ.
ವಿಷಾಹಾರ ಸೇವಿಸಿ ಅಸ್ವಸ್ಥಗೊಂಡಿದ್ದ ಯುವತಿ ಮಲ್ಲಮ್ಮ(೨೪) ಕಳೆದ ಒಂದು ವಾರದಿಂದ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಬುಧವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಯುವತಿ ಮಲ್ಲಮ್ಮ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ, ಮೃತದೇಹವನ್ನು ಕುಟುಂಬಸ್ಥರಿಗೆ ಒಪ್ಪಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

Previous articleಬಾಲಕಿ ಕೊಲೆ: ಆರೋಪಿ ಸೆರೆ
Next articleಶೀಘ್ರದಲ್ಲೇ ಗೃಹ ಆರೋಗ್ಯ ಯೋಜನೆ ಜಾರಿ