ಬೆಂಗಳೂರು: ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಭಾರೀ ಮುಖಭಂಗ ಆಗಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ನ ಎರಡನೇ ದಿನದಾಟದಲ್ಲಿ ಭಾರತ ತಂಡ ಕೇವಲ 46 ರನ್ ಗಳಿಗೆ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡಿದೆ.
ಟೀಂ ಇಂಡಿಯಾದ ಐದು ಬ್ಯಾಟ್ಸ್ ಮನ್ ಗಳು ಸೊನ್ನೆ ಸುತ್ತಿ, ತಂಡವನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. 31.2 ಓವರ್‌ನಲ್ಲಿ ಭಾರತ 46 ರನ್‌ಗಳಿಸಿ ತನ್ನ ಎಲ್ಲ ವಿಕೆಟ್ ಕಳೆದುಕೊಂಡಿತು.