ಕವಿತಾಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ

0
12

ನವದೆಹಲಿ: ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಇ.ಡಿ ತನಿಖೆ ನಡೆಸುತ್ತಿರುವ ಭ್ರಷ್ಟಾಚಾರ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣಗಳಲ್ಲಿ ಸಿಬಿಐ ಮತ್ತು ಇ.ಡಿ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರು ಅರ್ಜಿಗಳನ್ನು ವಜಾಗೊಳಿಸಿದ್ದು, ತನಿಖೆ ಪ್ರಗತಿಯಲ್ಲಿರುವ ಈ ಹಂತದಲ್ಲಿ ಜಾಮೀನು ನೀಡುವುದು ಸರಿಯಲ್ಲ ಎಂದು ಹೇಳಿದ್ದಾರೆ. ಬಿಆರ್‌ಎಸ್ ನಾಯಕಿ ಕವಿತಾ ಅವರನ್ನು ಮಾರ್ಚ್ 15ರಂದು ಹೈದರಾಬಾದ್‌ನ ಬಂಜಾರಾ ಹಿಲ್ಸ್ ನಿವಾಸದಿಂದ ಇ.ಡಿ ಅಧಿಕಾರಿಗಳು ಬಂಧಿಸಿದ್ದರು. ಇ.ಡಿ ಮತ್ತು ಸಿಬಿಐ ದಾಖಲಿಸಿರುವ ಎರಡೂ ಪ್ರಕರಣಗಳಲ್ಲಿ ಕವಿತಾ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

Previous articleಗದ್ದೆಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್‌
Next articleವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ-ಇಬ್ಬರ ಸಾವು