ಕಾಂಗ್ರೆಸ್‌ನವರದು ಚೊಂಬು, ಮೋದಿಯವರದು ಅಕ್ಷಯ ಪಾತ್ರೆ

0
26

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಪೂರ್ವ ಸಿದ್ದತೆ ಇಲ್ಲದ ಗ್ಯಾರೆಂಟಿ ಹೆಸರಿನಲ್ಲಿ ರಾಜ್ಯವನ್ನು ದಿವಾಳಿ ಮಾಡಿದ್ದು, ಆರ್ಥಿಕ ವಿಚಾರದಲ್ಲಿ ಹತಾಶರಾಗಿ ತೀರ ಕೆಳಮಟ್ಟಕ್ಕೆ ಇಳಿದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹತ್ತು ವರ್ಷದ ಎನ್‌ಡಿಎ ಆಡಳಿತದಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ವಿಪತ್ತು ನಿರ್ವಹಣಾ ಮಾನದಂಡ ಬದಲಾಗಿದೆ. ಕೇಂದ್ರದಿಂದ ರಾಜ್ಯಕ್ಕೆ ಬರುವ ತೆರಿಗೆ ಪಾಲಿನ‌ ಹಣ ಹೆಚ್ಚಿಗೆ ಬಂದಿದೆ. ಇದೆಲ್ಲವನ್ನೂ ರಾಜ್ಯ ಸರ್ಕಾರ ಮರೆಮಾಚಿದೆ. ತನ್ನ ತಪ್ಪು ಮುಚ್ಚಿಕೊಳ್ಳಲು ತೀರ ತಳಮಟ್ಟಕ್ಕೆ ಹೋಗಿ ಕಾಂಗ್ರೆಸ್ ನಡೆದುಕೊಳ್ಳುತ್ತಿದೆ. ಹಣಕಾಸು ವಿಚಾರದಲ್ಲಿ ಹತಾಶರಾಗಿ ಕಾಂಗ್ರೆಸ್ ನಾಯಕರು ತೀರ ಕೆಳಮಟ್ಟದ ಭಾಷೆ ಬಳಸುತ್ತಿದ್ದಾರೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದಿಂದ ಕೇಂದ್ರಕ್ಕೆ
ನಾಲ್ಕು ಲಕ್ಷ‌ಕೋಟಿ ತೆರಿಗೆ ಕೊಡುತ್ತೇವೆ ಎನ್ನುತ್ತಾರೆ. ಆದರೆ, ಕೇಂದ್ರದ ನೇರ ತೆರಿಗೆ, ರಾಜ್ಯಕ್ಕೆ ನೀಡುವ ತೆರಿಗೆ ಪಾಲಿನ ಹಂಚಿಕೆ ಪಾಲಿನಲ್ಲಿ ಬರುವುದಿಲ್ಲ. ಅದು ಪ್ರಥಮ ಪ್ರಧಾನಿ ಜವಾಹರಲಾಲ ನೆಹರೂ ಅವರ ಕಾಲದಿಂದ ಇದೆ. ಈ ಪದ್ದತಿ ಜಿಎಸ್ಟಿಗೆ ಮಾತ್ರ ಅನ್ವಯವಾಗತ್ತದೆ ಎಂದರು.
ರಾಜ್ಯ ಸರ್ಕಾರ ಜನರಿಗೆ ಚೊಂಬು ಕೊಟ್ಟಿದೆ
ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ್ ಯೋಜನೆ ಜೊತೆಗೆ ರಾಜ್ಯ ಸರ್ಕಾರವೂ ರೈತರಿಗೆ 4 ಸಾವಿರ ರೂ. ನೀಡುತ್ತಿತ್ತು. ರಾಜ್ಯ ಸರ್ಕಾರ ಅದನ್ನು ಕಡಿತ ಮಾಡಿ, ರೈತರಿಗೆ ಚಂಬು ಕೊಟ್ಟಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ರೈತ ವಿದ್ಯಾನಿಧಿ ಯೋಜನೆ ಅಡಿಯಲ್ಲಿ 13 ಲಕ್ಷ ವಿದ್ಯಾರ್ಥಿಗಳಿ ಸ್ಕಾಲರ್ ಶಿಪ್ ಕೊಡಲಾಗಿತ್ತು, ಅದನ್ನು ನಿಲ್ಲಿಸಿದ್ದಾರೆ. ದಲಿತ ಸಮುದಾಯಕ್ಕೆ ಮೀಸಲಿಟ್ಟಿದ್ದ ಎಸ್ಸಿಪಿ ಟಿಎಸ್ಪಿಯ 11380 ಕೋಟಿ ಎಸ್ಸಿಎಸ್ಟಿ ಅನುದಾನವನ್ನ ಗ್ಯಾರಂಟಿಗೆ ಬಳಕೆ ಮಾಡಿಕೊಂಡಿದ್ದಾರೆ. ಇದೆಲ್ಲ ಮಾಡಿ ರಾಜ್ಯದ ಜನತೆಗೆ ಚೊಂಬು ಕೊಟ್ಟಿದ್ದು ರಾಜ್ಯ ಸರ್ಕಾರ ಎಂದು ಆರೋಪಿಸಿದರು.
ಮೋದಿಯವರದು ಅಕ್ಷಯಪಾತ್ರೆ
ಪ್ರಧಾನಿ ನರೇಂದ್ರ ಮೋದಿಯವರು ಜನರಿಗೆ ಶಾಸ್ವತ ಯೋಜನೆಗಳನ್ನು ಕೊಟ್ಟಿದ್ದಾರೆ. ಈ ಮೂಲಕ ಮೋದಿಯವರು ಚೊಂಬನ್ನು ಅಕ್ಷಯ ಪಾತ್ರೆ ಮಾಡಿದ್ದಾರೆ. 6 ಲಕ್ಷ ಬೀದಬದಿ ವ್ಯಾಪಾರಸ್ಥರಿಗೆ ಅನುದಾನ ನೀಡಿದ್ದಾರೆ. 9 ಲಕ್ಷ ಮನೆಗಳಿಗೆ ಉಜ್ವಲ ಗ್ಯಾಸ್ ಸಂಪರ್ಕ ಕಲ್ಪಿಸಿದ್ದಾರೆ. ಪ್ರದಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ 4 ಲಕ್ಷ ಮನೆ,12 ಲಕ್ಷ ಶೌಚಾಲಯ, ಕೊವಿಡ್ ಸಂದರ್ಭದಲ್ಲಿ ಹತ್ತು ಕೆಜಿ ಉಚಿತ ಅಕ್ಕಿ ಕೊಟ್ಟಿದ್ದು ನರೇಂದ್ರ ಮೋದಿ, ಚೊಂಬನ್ನು ಅಕ್ಷಯ ಪಾತ್ರೆ ಮಾಡಿದ್ದು ನರೇಂದ್ರ ಮೋದಿ. ಕಾಂಗ್ರೆಸ್ ಒಂದು ಕಾಳು ಅಕ್ಕಿ ಕೊಟ್ಟಿಲ್ಲ, ಇದನ್ನು ಕಾಂಗ್ರೆಸ್ ಚೊಂಬಿಗೆ ಸೇರಿಸಿಕೊಳ್ಳಲಿ ಎಂದರು.

Previous articleನಾಲಾಯಕ್‌ಗೆ ಮತ ಹಾಕ್ತೀರಾ?
Next articleವಾಣಿಜ್ಯ ನಗರಿ ಹುಬ್ಬಳ್ಳಿಗೆ ಜೆಪಿ ನಡ್ಡಾ