ಕಾಂಗ್ರೆಸ್‌ನವರಿಗೆ ಮೋದಿ ಶನಿನೇ

0
14

ಬೆಂಗಳೂರು: ಯಾರು ಭ್ರಷ್ಟಾಚಾರ ಮಾಡುತ್ತಾರೆ, ಯಾರು ದೇಶವಿರೊಧಿ ಚಟುವಟಿಕೆ ಮಾಡುತ್ತಾರೆ. ಯಾರು ಜನವಿರೋಧಿ ಕೆಲಸ ಮಾಡುತ್ತಾರೆ ಅವರಿಗೆ ಮೋದಿಯವರು ಶನಿಯಾಗಿ ಕಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ರಮೇಶ್ ಕುಮಾರ್ ಪ್ರಧಾನಿ ನರೇಂದ್ರ ಮೋದಿಯವರ ಕುರಿತು ಆಡಿರುವ ಮಾತಿಗೆ ತಿರುಗೇಟು ನೀಡಿದರು. ರಮೇಶ್ ಕುಮಾರ್ ಅವರು ಎಷ್ಟು ಸತ್ಯವಂತರು ಎನ್ನುವುದು ಎಲ್ಲರಿಗೂ ಗೊತ್ತಿದೆ. ಮೋದಿಯವರು ರಮೇಶ್ ಕುಮಾರ್ ಮತ್ತು ಕಾಂಗ್ರೆಸ್‌ಗೆ ಶನಿಯಾಗಿದ್ದಾರೆ. ದೇಶಭಕ್ತರಿಗೆ, ಯುವಕರಿಗೆ, ಹೆಣ್ಣುಮಕ್ಕಳಿಗೆ ಅವರು ವರವನ್ನು ಕೊಡುತ್ತಾರೆ. ರಮೇಶ್‌ಕುಮಾರ್ ಅವರಿಗೆ ಅದರ ಒಳ ಮರ್ಮ ಗೊತ್ತಿದೆ ಎಂದು ತಿರುಗೇಟು ನೀಡಿದರು.

Previous articleಮತಾಂತರಕ್ಕೆ ಒಪ್ಪದ್ದರಿಂದ ನೇಹಾ ಕೊಲೆ
Next articleನಾಲಾಯಕ್‌ಗೆ ಮತ ಹಾಕ್ತೀರಾ?