ಇಳಕಲ್: ಭ್ರಷ್ಟ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ತುಘಲಕ್ ಆಡಳಿತ ನಡೆಸಿದೆ ಎಂದು ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ವಾಗ್ದಾಳಿ ನಡೆಸಿದರು.
ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಲಿನ ದರ ಹಿಡಿದು ಜೀವನಾವಶ್ಯಕ ವಸ್ತುಗಳ ದರ ಏರಿಸುವ ಜೊತೆಗೆ ಬಸ್ ಮತ್ತು ವಿದ್ಯುತ್ ದರ ದರ ಏರಿಕೆ ಮಾಡಿ ಜನಸಾಮಾನ್ಯರನ್ನು ಗೋಳು ಹೊಯ್ದುಕೊಳ್ಳುತ್ತಿರುವ ಕಾರಣ ಬಿಜೆಪಿ ರಾಜ್ಯಾದ್ಯಂತ ಜನಾಕ್ರೋಶ ಸಭೆಗಳನ್ನು ಜಿಲ್ಲಾ ಕೇಂದ್ರದಲ್ಲಿ ನಡೆಸುತ್ತಿದೆ ಎ. 17ರಂದು ಬಾಗಲಕೋಟೆಯಲ್ಲಿ ನಡೆಯಲಿರುವ ಜನಾಕ್ರೋಶ ಸಭೆಯಲ್ಲಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಗಬೇಕು ಎಂದರು.
ಸಾಕಪ್ಪ ಸಾಕು ಕಾಂಗ್ರೆಸ್ ಸರಕಾರದ ಸಹವಾಸ ಎನ್ನುವಂತೆ ಒಂದೆಡೆ ಬಡ ಜನರಿಂದ ಕಿತ್ತುಕೊಂಡು ಇನ್ನೊಂದೆಡೆ ಗ್ಯಾರಂಟಿ ಹೆಸರಲ್ಲಿ ಹಣವನ್ನು ಸಹ ಸರಿಯಾಗಿ ಹಾಕದೇ ಸತಾಯಿಸುತ್ತಿದೆ ಇದರಿಂದಾಗಿ ಜನಸಾಮಾನ್ಯರು ರೋಸಿ ಹೋಗಿದ್ದಾರೆ ಎಂದು ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ನಗರ ಘಟಕ ಅಧ್ಯಕ್ಷ ಅರವಿಂದ ಮಂಗಳೂರ ಗ್ರಾಮೀಣ ಭಾಗದ ಅಧ್ಯಕ್ಷ ಮಹಾಂತಗೌಡ ಪಾಟೀಲ ತೊಂಡಿಹಾಳ, ಮಹಾಂತಪ್ಪ ಚೆನ್ನಿ, ಲಕ್ಷ್ಮಣ ಗುರಂ ಸುಗೂರೇಶ ನಾಗಲೋಟಿ ಚಂದ್ರಶೇಖರ ಎರಕಬೋಟೆ ಮತ್ತಿತರರಿದ್ದರು.