ಕಾಂಗ್ರೆಸ್​ನ ಐವರು ಬಂಡಾಯ ಅಭ್ಯರ್ಥಿಗಳ ಉಚ್ಚಾಟನೆ

0
18
ಕಾಂಗ್ರೆಸ್‌

ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಟಿಕೆಟ್ ತಪ್ಪಿ ಕೆಲ ನಾಯಕರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆದರೆ ​ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೂಚನೆ ಮೇರೆಗೆ ಒಟ್ಟು ಐವರು ಬಂಡಾಯ ಅಭ್ಯರ್ಥಿಗಳನ್ನು ಉಚ್ಚಾಟಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಆದೇಶ ಹೊರಡಿಸಿದ್ದಾರೆ. ನೈಋತ್ಯ ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿ ಎಸ್.ಪಿ.ದಿನೇಶ್, ಬೆಂಗಳೂರು ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿ ಫರ್ಡಿನಾಂಡ್ ಲಾರೆನ್ಸ್, ನೈಋತ್ಯ ಶಿಕ್ಷಕರ ಕ್ಷೇತ್ರದ ಬಂಡಾಯ ಅಭ್ಯರ್ಥಿ ಅಭ್ಯರ್ಥಿ ಬಿ.ಆರ್‌.ನಂಜೇಶ್‌, ಆಗ್ನೇಯ ಶಿಕ್ಷಕರ ಕ್ಷೇತ್ರದ ಬಂಡಾಯ ಅಭ್ಯರ್ಥಿಗಳಾದ ಲೋಕೇಶ್ ತಾಳಿಕಟ್ಟೆ ಮತ್ತು ವಿನೋದ್ ಶಿವರಾಜ್ ಉಚ್ಚಾಟಿನೆಗೊಂಡವರು.

Previous articleಸಂಪರ್ಕ ಸೇತುವೆಯಾಗಿ ಸಲಹಾ ಪೆಟ್ಟಿಗೆ
Next articleಭಾರಿ ಮಳೆ: ನೆಲಕ್ಕುರುಳಿದ ವಿದ್ಯುತ್‌ ಕಂಬ, ಮರ