Home ತಾಜಾ ಸುದ್ದಿ ಕಾಂಗ್ರೆಸ್ಸಿನವರು ಎಂದಿಗೂ ತಮ್ಮ ತಪ್ಪು ಒಪ್ಪಿಕೊಳ್ಳಲ್ಲ

ಕಾಂಗ್ರೆಸ್ಸಿನವರು ಎಂದಿಗೂ ತಮ್ಮ ತಪ್ಪು ಒಪ್ಪಿಕೊಳ್ಳಲ್ಲ

0

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷ ಹಾಗೂ ಕಾಂಗ್ರೆಸಿನವರು ಎಂದಿಗೂ ಕೂಡ ತಮ್ಮ ತಪ್ಪನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದರವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ೬೦ ವರ್ಷ ಆಡಳಿತ ನಡೆಸಿದ್ದಾರೆ. ಅವರ ಸರ್ಕಾರದ ರೂಪುರೇಷೆಗಳನ್ನು ನೋಡಿದರೇ ನಿಜಕ್ಕೂ ನಮಗೆ ಒಂದು ತರಹ ನಗು ಬರುತ್ತದೆ. ಕೋಟ್ಯಾಂತರ ಹಣವನ್ನು ಲೂಟಿ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಐಟಿ ಅಧಿಕಾರಿಗಳು ನೋಟಿಸ್ ಕೊಡದೇ ಏನ್ನೇನು ಮಾಡುತ್ತಾರೆ ಎಂದು ಪ್ರಶ್ನಿಸಿದರು.
೨೦೧೬ ಹಾಗೂ ೨೦೧೯ರಲ್ಲಿ ದೊಡ್ಡ ಮಟ್ಟದ ಹಣವನ್ನು ಕಾಂಗ್ರೆಸ್‌ನವರು ತೆಗೆದುಕೊಂಡಿದ್ದಾರೆ. ಕೋಟ್ಯಾಂತರ ರೂಪಾಯಿ ಲೂಟಿ ಮಾಡಿದ್ದು, ಕಾನೂನು ಪ್ರಕಾರ ಐಟಿ ಅಧಿಕಾರಿಗಳು ನೋಟಿಸ್ ಕೊಟ್ಟಿದ್ದಾರೆ. ಐಟಿ ನೋಟಿಸ್ ಕೊಟ್ಟು ತನಿಖೆಗೆ ಮುಂದಾಗಿದ್ದರೇ ಇದನ್ನು ಕಾಂಗ್ರೆಸ್ ಪಕ್ಷ ರಾಜಕೀಯ ದುರುದ್ದೇಶ ಎಂದು ಟೀಕೆ ಮಾಡುತ್ತಿರುವುದು ನಿಜಕ್ಕೂ ವಿಪರ್ಯಾಸಕರ ಸಂಗತಿ. ತಮ್ಮ ತಪ್ಪನ್ನು ಒಪ್ಪಿಕೊಳ್ಳದ ಮನಸ್ಥಿತಿಗೆ ಕಾಂಗ್ರೆಸ್ ಬಂದು ತಲುಪಿದೆ.
ಇನ್ನೂ ದಿಂಗಾಲೇಶ್ವರ ಸ್ವಾಮೀಜಿ ಹೇಳಿಕೆ ವಿಚಾರವಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಯಾವುದಕ್ಕೂ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಪ್ರಲ್ಹಾದ ಜೋಶಿ ಹೇಳಿದರು.

Exit mobile version