ಬಳ್ಳಾರಿ: ಸಂಡೂರು ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಂ ಅವರು ಇಂದು ಬೆಳಗ್ಗೆ ೧೧.೩೦ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ.
ಸಂಸದ ಇ.ತುಕಾರಾಂ ಪತ್ನಿಯಾಗಿರುವ ಅನ್ನಪೂರ್ಣ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡಿದೆ. ಇದೇ ಮೊದಲ ಬಾರಿಗೆ ರಾಜಕೀಯ ಅಖಾಡಕ್ಕೆ ಇಳಿದಿರುವ ಅನ್ನಪೂರ್ಣ ನಾಮಿನೇಷನ್ ಗೆ ಸಕಲ ಸಿದ್ದತೆ ಮಾಡಿಕೊಂಡಿದ್ದಾರೆ. ನಾಮಪತ್ರ ಸಲ್ಲಿಕೆಗೆ ಸಚಿವರಾದ ಜಮೀರ್ ಅಹ್ಮದ್ ಖಾನ್, ಸಂತೋಷ ಲಾಡ್ ಸಾಥ್ ನೀಡಲಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ಬೃಹತ್ ರೋಡ್ ಶೋ ಹಮ್ಮಿಕೊಳ್ಳಲಾಗಿದೆ. ಸಂಡೂರಿನ ಎಪಿಎಂಸಿಯಿಂದ ತಾಲೂಕು ಆಡಳಿತದ ಕಚೇರಿವರೆಗೂ ರೋಡ್ ಶೋ ನಡೆಯಲಿದೆ.