Home ತಾಜಾ ಸುದ್ದಿ ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ‘ಉಡುಗೊರೆ’

ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ‘ಉಡುಗೊರೆ’

0

ಬೆಂಗಳೂರು: ಕೋಟ ಶ್ರೀನಿವಾಸ ಪೂಜಾರಿ ಅವರು ಸಂಸದರಾಗಿದ್ದರಿಂದ ತೆರವಾಗಿದ್ದ ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ತನ್ನ ಸ್ಥಾನ ಉಳಿಸಿಕೊಂಡಿದೆ. ಇದು ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಮತದಾರರು ಕೊಟ್ಟ ಉಡುಗೊರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.
ಕೋಟ ಶ್ರೀನಿವಾಸ ಪೂಜಾರಿ ಅವರ ಅವಧಿಪೂರ್ವ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಈ ಉಪಚುನಾವಣೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಅವರು ಗರಿಷ್ಠ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಅವರಿಗೆ ಅಭಿನಂದನೆಗಳು ಎಂದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಜಿಲ್ಲೆಗಳು ಬಿಜೆಪಿ ಭದ್ರಕೋಟೆಗಳು ಎಂಬುದು ಮತ್ತೆ ಸಾಬೀತಾಗಿದೆ. ಅಲ್ಲದೆ, ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಲು ಇದು ಉತ್ತೇಜನ ಕೊಡಲಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Exit mobile version