ನೀವು ಏನ್ ಬೇಕಾದರೂ ಮಾಡಬಹುದು ಎಂದುಕೊಂಡರೇ ಅದಕ್ಕೆ ಹಿಂದೂ ಸಮಾಜ ಉತ್ತರ ನೀಡುತ್ತದೆ
ದಾವಣಗೆರೆ: ಕೆಜೆ ಹಳ್ಳಿ ಡಿಜೆ ಹಳ್ಳಿ, ಹುಬ್ಬಳ್ಳಿ ಶಿವಮೊಗ್ಗ ಸೇರಿದಂತೆ ಹಲವು ಘಟನೆಗಳಲ್ಲಿ ಪೊಲೀಸರು ಓಡಿ ಹೋಗುವಂತಾಗಿದೆ ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ದಾವಣಗೆರೆಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಪ್ರಮೋಧ್ ಮುತಾಲಿಕ್ ಉದಯಗಿರಿಯಲ್ಲಿ ಮುಸ್ಲಿಮರೇ ಜಾಸ್ತಿ ಇರುವ ಏರಿಯಾವಾಗಿದ್ದು, ಅಲ್ಲಿ ಈ ಘಟನೆ ನಡೆದಿದೆ. ಮೈಸೂರಿನಲ್ಲಿ ಸೋಮವಾರ ರಾತ್ರಿ ಏಕಾಏಕಿ ನೂರಾರು ಜನರು ಉದಯಗಿರಿ ಪೊಲೀಸ್ ಠಾಣೆ ಮುಂದೆ ಸೇರಿ, ಗಲಾಟೆ, ಕೂಗಾಟ, ಘೋಷಣೆಗಳು ಕೊನೆಗೆ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ, ಒಬ್ಬ ಆರೋಪಿ ಸಾಮಾಜಿಕ ಮಾಧ್ಯಮದಲ್ಲಿ ಹರಿಬಿಟ್ಟಿದ್ದ ಒಂದು ಪೋಸ್ಟ್ ಇಷ್ಟೆಲ್ಲ ಅವಾಂತರಕ್ಕೆ ಕಾರಣವಾಗಿತ್ತು, ಯಾರು ತಪ್ಪು ಮಾಡಿದ್ದಾನೋ ಆತನನ್ನು ಬಂಧಿಸಿದ್ದಾರೆ. ಕಾನೂನು, ಸಂವಿಧಾನದ ಪ್ರಕಾರ ತಪ್ಪಿತಸ್ಥನಿಗೆ ಶಿಕ್ಷೆ ಆಗುತ್ತೆ. ಅದನ್ನು ಬಿಟ್ಟು ಕಲ್ಲು ತೂರಾಟ ನಡೆಸಿ ದಾಂದಲೆ ನಡೆಸಿದ್ದು ಎಷ್ಟು ಸರಿ. ನಿಮಗೆ ಏನ್ ತೊಂದರೆಯಾಗಿದೆ ಎಂದು ದೂರು ನೀಡಿ ಧರಣಿ ಮಾಡಿ. ನೀವು ಎಷ್ಟು ಭಾರೀ ಹಿಂದೂ ದೇವರುಗಳ ಮೇಲೆ ಅವಹೇಳನಕಾರಿಯಾಗಿ ಮಾತಾಡಿಲ್ಲ, ನಾವು ಕೂಡ ಈ ರೀತಿ ಎದ್ದರೇ ಏನಾಗಬಹುದು ಹೇಳಿ, ನೀವು ಏನ್ ಬೇಕಾದರೂ ಮಾಡಬಹುದು ಎಂದುಕೊಂಡರೇ ಅದಕ್ಕೆ ಹಿಂದೂ ಸಮಾಜ ಉತ್ತರ ನೀಡುತ್ತದೆ, ಅಲ್ಪಸಂಖ್ಯಾತ ಸಮುದಾಯದ ಗೂಂಡಾಗಳಿಗೆ ಕಾಂಗ್ರೆಸ್ ಕುಮ್ಮಕ್ಕು ನೀಡುತ್ತಿರುವ ಪರಿಣಾಮವಾಗಿ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆದಿದೆ ಎಂದರು.