ಕಾಂಗ್ರೆಸ್ ಗೆದ್ದರೆ ಸರ್ಕಾರಕ್ಕೆ ಬಲ

0
8

ಬೆಳಗಾವಿ(ಅರಭಾವಿ): ಬೆಳಗಾವಿ ಹಾಗೂ ಚಿಕ್ಕೋಡಿ ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಬಲ ತುಂಬಿದಂತಾಗುತ್ತದೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಅರಭಾವಿ ವಿಧಾನಸಭಾ ಕ್ಷೇತ್ರದ ದುರದುಂಡಿ, ರಾಜಾಪುರ, ಶಿವಾಪುರ, ಖಾನಟ್ಟಿ ಹಾಗೂ ಮುನ್ಯಾಳ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಪರ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜೊತೆಗೂಡಿ ನಡೆಸಿದ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಗೃಹಲಕ್ಷ್ಮಿ, ಶಕ್ತಿ ಯೋಜನೆ, ಗೃಹ ಜ್ಯೋತಿ, ಅನ್ನಭಾಗ್ಯ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಮಹಿಳೆಯರಿಗೆ ಸಿದ್ದರಾಮಯ್ಯ ಸಹಾಯ ಹಸ್ತ ಚಾಚಿದ್ದಾರೆ. ಮತಗಳ ಮೂಲಕ ಸರ್ಕಾರವನ್ನು ಬೆಂಬಲಿಸಬೇಕು ಎಂದರು.

Previous articleಐಪಿಎಸ್ ಅಧಿಕಾರಿ ವಿರುದ್ಧ ಪ್ರಕರಣ
Next articleಈಜಲು ಹೋಗಿದ್ದ ಮೂವರು ಬಾಲಕರು ಕೆಸರಲ್ಲಿ ಸಿಲುಕಿ ಸಾವು