Home ನಮ್ಮ ಜಿಲ್ಲೆ ಚಿಕ್ಕಮಗಳೂರು ಕಾಂಗ್ರೆಸ್ ಗೆಲ್ಲಲ್ಲ- ರಾಜ್ಯದಲ್ಲಿ ಗ್ಯಾರೆಂಟಿಗಳು ನಿಲ್ಲಲ್ಲ

ಕಾಂಗ್ರೆಸ್ ಗೆಲ್ಲಲ್ಲ- ರಾಜ್ಯದಲ್ಲಿ ಗ್ಯಾರೆಂಟಿಗಳು ನಿಲ್ಲಲ್ಲ

0

ಚಿಕ್ಕಮಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲ್ಲ ರಾಜ್ಯದಲ್ಲಿ ಗ್ಯಾರೆಂಟಿಗಳು ನಿಲ್ಲಲ್ಲ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಲೇವಡಿ ಮಾಡಿದ್ದಾರೆ.
ಬಿಜೆಪಿ ನೂತನ ಜಿಲ್ಲಾಧ್ಯಕ್ಷರಾಗಿ ದೇವರಾಜ್ ಶೆಟ್ಟಿ ಪದಗ್ರಹಣ ಕಾರ್ಯಕ್ರಮಕ್ಕೆ ಆಗಮಿಸಿ ಅವರು ಸುದ್ದಿಗಾರೋಂದಿಗೆ ಮಾತನಾಡಿರುವ ಅವರು ರಾಜ್ಯದಲ್ಲಿ 28 ಕ್ಷೇತ್ರಗಳಲ್ಲಿ ದೃಷ್ಟಿಬೊಟ್ಟಿನಂತೆ ಒಂದು ಕ್ಷೇತ್ರ ಗೆದ್ದಿದೆ ಈ ಬಾರಿ ಅದೂ ಗೆಲ್ಲಲ್ಲ ಎಂದು ಕಾಂಗ್ರೆಸ್ ಪಕ್ಷದ ಕಾಲೆಳೆದರು.
ಮಾಗಡಿ ಶಾಸಕ ಬಾಲಕೃಷ್ಣ ಹೇಳಿಕೆಯನ್ನು ಸ್ವಾಗತಿಸುತ್ತೇನೆ ಎಂದ ಅಶೋಕ್ ಕಾಂಗ್ರೆಸ್ ಲೋಕಸಭಾ ಚುನಾವಣೆ ಸೋಲುವ ಮುಂದಾಲೋಚನೆಯಿಂದ ಆ ಪಕ್ಷದ ಮುಖಂಡರು ಗ್ಯಾರೆಂಟಿ ರದ್ದು ಎನ್ನುತ್ತಿದ್ದಾರೆ, ಬಿಜೆಪಿ ಬಿಟ್ಟ ಮುಖಂಡರ ಘರ್ ವಾಪ್ಪಿ ಮುಂದುವರಿಯಲಿದೆ, ಎಲ್ಲರು ಬರುತ್ತಾರೆ, ಬರುವವರಿಗೆ ನಾವು ಸ್ವಾಗತ ಮಾಡುತ್ತೇವೆ ಎಂದರು. ನರೇಂದ್ರ ಮೋದಿ ಪ್ರಧಾನಿ ಮಾಡಲು ಎಲ್ಲರೂ ಬಿಜೆಪಿಗೆ ಬರುತ್ತಾರೆ. ರಾಹುಲ್ ಗಾಂಧಿ ಹೋದಲೆಲ್ಲಾ ಕಾಂಗ್ರೆಸ್ ಖಾಲಿಯಾಗುತ್ತಿದೆ ಎಂದು ಕಿಚಾಯಿಸಿದ ಅವರು ಲೋಕಸಭಾ ಚುನಾವಣೆಗೆ ಮಂಡ್ಯ ಟಿಕೆಟ್ ನಿಖಿಲ್ ಕುಮಾರಸ್ವಾಮಿಗೆ ಎನ್ನುವ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ ಎಂದರು.

Exit mobile version