ಕಾಂಗ್ರೆಸ್ ಪಕ್ಷದಲ್ಲಿ ಶೆಟ್ಟರ್‌ ಅವರಿಗೆ ಯಾವುದೇ ಅನ್ಯಾಯ, ಅವಮಾನ ಆಗಿಲ್ಲ

0
10

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಜಗದೀಶ ಶೆಟ್ಟರ್‌ ಅವರಿಗೆ ಯಾವುದೇ ಅನ್ಯಾಯ, ಅವಮಾನ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಜಗದೀಶ್ ಶೆಟ್ಟರ್ ಅವರು ಬಿಜೆಪಿ ಟಿಕೆಟ್ ಕೊಡದೇ ಅವಮಾನ ಮಾಡಿದ್ದಾರೆ ಎಂದು ಹೇಳಿ ಕಾಂಗ್ರೆಸ್ ಸೇರಿದ್ದರು. ನಾವು ಅವರಿಗೆ ಟಿಕೆಟ್ ಕೊಟ್ಟರೂ ವಿಧಾನಸಭಾ ಚುನಾವಣೆಯಲ್ಲಿ ಸೋತರು. ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿ ಅವರನ್ನು ಗೌರವಯುತವಾಗಿ ನಡೆಸಿಕೊಂಡಿದ್ದೇವೆ. ಯಾವ ಕಾರಣಕ್ಕೆ ಅವರು ಪುನ: ಬಿಜೆಪಿಗೆ ಸೇರ್ಪಡೆಯಾಗಿದ್ದಾರೆಂದು ನನಗೆ ಗೊತ್ತಿಲ್ಲ. ನನ್ನ ಬಳಿ ಬಿಜೆಪಿಯಲ್ಲಿ ಅವಮಾನವಾಗಿದ್ದು ಮತ್ತೆ ವಾಪಸ್ಸು ಹೋಗುವುದಿಲ್ಲ ಎಂದಿದ್ದರು. ನನ್ನನ್ನು ಅವರು 10 ದಿನಗಳ ಹಿಂದೆ ಸಭೆಯೊಂದರಲ್ಲಿ ಭೇಟಿ ಮಾಡಿದ್ದರು, ಆ ನಂತರ ಸಿಕ್ಕಿರಲಿಲ್ಲ ಎಂದರು.

Previous articleಶೃಂಗೇರಿ ಶ್ರೀ ಶಾರದ ಪೀಠದ ನೂತನ ಸಿಇಒ ಆಗಿ ಪಿ.ಎ.ಮುರಳಿ ನೇಮಕ
Next articleಶೆಟ್ಟರ್‌ ಘನತೆಗೆ ಶೋಭೆ ತರುವುದಿಲ್ಲ