ಕಲಬುರಗಿ: ಕಲಬುರಗಿ ಕಾಂಗ್ರೆಸ್ ಮುಖಂಡ ಭೀಮಾಶಂಕರ್ ಬಿಲಗುಂದಿ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ನಗರದ ರಿಂಗ್ ರೋಡ್ ಬಳಿಯಿರುವ ಭೀಮಾಶಂಕರ್ ಬಿಲಗುಂದಿ ಅವರ ಮನೆ ಮೇಲೆ ದಾಳಿ ಮಾಡಿದ್ದು, ದಾಖಲೆ ಪರಿಶೀಲನೆ ನಡೆಸಿದ್ದಾರೆ. ಎಂಆರ್‌ಎಂಸಿ ಮೆಡಿಕಲ್ ಕಾಲೇಜಿನ ಶಿಷ್ಯವೇತನ ಹಗರಣದ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಇಡಿ ದಾಳಿ ಮಾಡಿರುವ ಶಂಕೆ ವ್ಯಕ್ತವಾಗಿದೆ. 2018 ರಿಂದ 2024ರ ವರೆಗೆ ಎರಡು ಅವಧಿಗೆ ಭೀಮಾಶಂಕರ್ ಅಧ್ಯಕ್ಷರಾಗಿದ್ದರು. 700 ಜನ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಹಣ ಕೊಡದೆ ವಂಚಿಸಲಾಗಿದೆ ಎಂದು ಆರೋಪಿಸಲಾಗಿದೆ. ಸುಮಾರು 80 ಕೋಟಿ ರೂ.ಗೂ ಅಧಿಕ ಹಣ ನೀಡದೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.ಅಧಿಕಾರಿಗಳು ಎಲ್ಲಾ ದಾಖಲೆಗಳನ್ನು ಜಾಲಾಡುತ್ತಿದ್ದಾರೆ.