ಕಾಂಗ್ರೆಸ್‌ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ

0
9

ಯಾದಗಿರಿ: ಸುರಪುರ ವಿಧಾನಸಭಾ ಕ್ಷೇತ್ರದ ಹಾಲಿ ಕಾಂಗ್ರೆಸ್‌ ಶಾಸಕ ರಾಜಾ ವೆಂಕಟಪ್ಪ ನಾಯಕ(67) ಹೃದಯಾಘಾತದಿಂದ ನಿಧನರಾದರು.
ಇಂದು ದಿಢೀರನೆ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರು ಎಂದು ತಿಳಿದುಬಂದಿದೆ.
ಕಾಂಗ್ರೆಸ್ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ ಅವರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಇತ್ತೀಚೆಗಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿಯೂ ಅಧಿಕಾರ ಸ್ವೀಕರಿಸಿದ್ದರು.

Previous articleಬೋರ್ಡ್ ಬದಲಾಗದಿದ್ದರೆ ಕರ್ನಾಟಕ ಬಂದ್
Next articleಬಾಗಲಕೋಟೆ ಗೊಂದಲಿ ಪದ ಹಾಡುಗಾರನನ್ನು ಶ್ಲಾಘಿಸಿದ ಮೋದಿ