ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತೊಂದು ಸುತ್ತಿನ ಹೋರಾಟ

0
27

ನವದೆಹಲಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಮತ್ತೊಂದು ಪಾದಯಾತ್ರೆ ನಡೆಸುವ ಮೂಲಕ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು, ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ನವದೆಹಲಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಹಗರಣ, ಮುಡಾ ಹಗರಣದ ವಿರುದ್ಧ ಬಿಜೆಪಿ ಹೋರಾಟ ನಿಲ್ಲದು ಎಂದು ಸ್ಪಷ್ಟಪಡಿಸಿದರು.
ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಹೋರಾಟ ಸರಿಯಾದ ದಿಕ್ಕಿನಲ್ಲೇ ನಡೆಯುತ್ತಿದೆ. ಪಕ್ಷದೊಳಗೆ ಯಾವುದೇ ಅಪಸ್ವರವಿಲ್ಲ. ಬಿಜೆಪಿ ಹೋರಾಟಕ್ಕೆ ಮೊದಲನೇ ಪಾದಯಾತ್ರೆ, ಎರಡನೇ ಪಾದಯಾತ್ರೆ ಎನ್ನಬೇಕಿಲ್ಲ. ಪಕ್ಷದೊಳಗೆ ಎಲ್ಲರೂ ಕೂಡಿಯೇ ಹೋರಾಟ ತೀವ್ರಗೊಳಿಸುತ್ತೇವೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಮತ್ತು ಗೃಹ ಸಚಿವರು ಸೇರಿದಂತೆ ನಾಯಕರೆಲ್ಲ ಸೇರಿ ಮತ್ತೊಂದು ಸುತ್ತಿನ ಹೋರಾಟದ ಬಗ್ಗೆ ನಿರ್ಧರಿಸಲಿದ್ದಾರೆ. ರಾಜ್ಯದ ಎಲ್ಲ ನಾಯಕರ ಮುಂದಾಳತ್ವದಲ್ಲೇ ನಡೆಯುತ್ತದೆ ಮತ್ತೊಂದು ಪಾದಯಾತ್ರೆ ಎಂದರು.

Previous articleಮುಸ್ಲಿಮರ ಒತ್ತಡ ಉತ್ತಮ ಶಿಕ್ಷಕ ಪ್ರಶಸ್ತಿಗೆ ತಡೆ
Next articleಬಿಜೆಪಿ ಗೊಂದಲದಿಂದ ಹೊರಬರಲಿ