ಕಾಂಗ್ರೆಸ್‌ ಸೇರ್ಪಡೆ ಆದ ತೇಜಸ್ವಿನಿ ಗೌಡ

0
15

ನವದೆಹಲಿ: ವಿಧಾನಪರಿಷತ್‌ನ ಮಾಜಿ ಬಿಜೆಪಿ ಸದಸ್ಯೆ ತೇಜಸ್ವಿನಿಗೌಡ ಅವರು ಇಂದು (ಶನಿವಾರ) ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.
ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರ ಸಮ್ಮುಖದಲ್ಲಿ ತೇಜಸ್ವಿನಿ ಕಾಂಗ್ರೆಸ್ ಸೇರಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ಪತ್ರಕರ್ತೆಯಾಗಿದ್ದ ನನಗೆ ಕಾಂಗ್ರೆಸ್ ಅವಕಾಶ ಕೊಟ್ಟಿತ್ತು. ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ವಿರುದ್ಧ ಸ್ಪರ್ಧೆಗೆ ಅವಕಾಶ ಕೊಟ್ಟಿತ್ತು. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು ತೇಜಸ್ವಿನಿಗೌಡ ಅವರು ಪರಿಷತ್‌ನ ಸದಸ್ಯತ್ವಕ್ಕೆ ಬುಧವಾರ ರಾಜೀನಾಮೆ ನೀಡಿದ್ದರು. ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ರಾಜೀನಾಮೆಯನ್ನು ಅಂಗೀಕರಿಸಿದ್ದರು.

Previous article‘ಭಾರತ ರತ್ನ’ ಪ್ರದಾನ
Next articleಚುನಾವಣಾ ಸಮಯದಲ್ಲಿ ಗೊಂದಲ ಸಹಜ