ಕಾಡಾನೆ ದಾಳಿಗೆ ಮಹಿಳೆ ಬಲಿ

0
20

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತಣಿಗೆಬೈಲು ಗ್ರಾಮದ ಅರೇಕಾ ಗ್ರೀವ್ಸ್ ಎಸ್ಟೇಟ್ ನಲ್ಲಿ ನಡೆದಿದೆ.

ವಿನೋದಾ (55) ಕಾಡಾನೆ ದಾಳಿಗೆ ಸಾವನ್ನಪ್ಪಿದ ಕಾರ್ಮಿಕ ಮಹಿಳೆ. ಕಾಫಿ ತೋಟದಲ್ಲಿ ಕೆಲಸ ಮಾಡುವಾಗ ಏಕಾಏಕಿ ವಿನೋದಾ ಅವರ ಮೇಲೆ ದಾಳಿ ಮಾಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಭದ್ರಾ ಅರಣ್ಯ ವಲಯಕ್ಕೆ ಸೇರಿದ್ದು, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ತಣಿಗೆಬೈಲು ರೇಂಜ್ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದ್ದು ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Previous articleಕಂದಕಕ್ಕೆ ಉರುಳಿದ ಬಸ್: ಪ್ರಯಾಣಿಕರು ಪ್ರಾಣಪಾಯದಿಂದ ಪಾರು
Next articleಹಗರಣಗಳಿಂದಲೇ ಅಪ್ ಕೊಚ್ಚಿ ಹೋಗಿದೆ…