Home ತಾಜಾ ಸುದ್ದಿ ಕಾಡಾನೆ ಸೆರೆ : ಅರಣ್ಯ ಇಲಾಖೆ ಸಿಬ್ಬಂದಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಕಾಡಾನೆ ಸೆರೆ : ಅರಣ್ಯ ಇಲಾಖೆ ಸಿಬ್ಬಂದಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

0

ಬೆಂಗಳೂರು: ಹಾಸನ ಜಿಲ್ಲೆಯ ಅರಣ್ಯದಂಚಿನ ಗ್ರಾಮಗಳ ಜನರಿಗೆ ಆತಂಕ ಸೃಷ್ಟಿಸಿದ್ದ ಎರಡು ಕಾಡಾನೆಗಳನ್ನು ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಇಂಥದ್ದೊಂದು ಸವಾಲಿನ ಕೆಲಸವನ್ನು ಕೈಗೆತ್ತಿಕೊಂಡು, ಹಗಲಿರುಳೆನ್ನದೆ ಶ್ರಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಇತರೆ ಎಲ್ಲಾ ಸಿಬ್ಬಂದಿಗಳಿಗೆ ಅಭಿನಂದನೆಗಳು. ನಿಮ್ಮ ಸೇವೆ ಮತ್ತು ಶ್ರಮದಿಂದ ಇಂದು ಹಾಸನದ ಜನ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ವನ್ಯಜೀವಿ – ಮಾನವ ಸಂಘರ್ಷದ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ನಿರಂತರ ಕೆಲಸ ಮಾಡುತ್ತಿದೆ. ಆನೆಗಳ ಸಂಖ್ಯೆ ಹೆಚ್ಚಿರುವ ಜಿಲ್ಲೆಗಳಲ್ಲಿ ರೈಲ್ವೆ ಹಳಿಗಳ ಬೇಲಿ ಹಾಕುವುದು, ಕಾಡು ಪ್ರಾಣಿಗಳಿಗೆ ಅರಣ್ಯದಲ್ಲೇ ಮೇವು, ನೀರು ಒದಗಿಸುವತ್ತ ನಾವು ಆದ್ಯತೆ ನೀಡಿದ್ದೇವೆ. ಮುಂದಿನ ಕೆಲ ಸಮಯದಲ್ಲಿ ಈ ಸಮಸ್ಯೆಗೆ ಕರ್ನಾಟಕ ಶಾಶ್ವತ ಪರಿಹಾರ ಕಂಡುಕೊಳ್ಳಲಿದೆ ಎಂಬ ವಿಶ್ವಾಸ ನನಗಿದೆ ಎಂದಿದ್ದಾರೆ.

Exit mobile version