ಕಾನೂನಿಗಿಂತ ಯಾರೂ ದೊಡ್ಡವರಲ್ಲ: ಸಚಿವ ಜೋಶಿ

0
9

ಹುಬ್ಬಳ್ಳಿ: ಈಗಿನ ಭಾರತದಲ್ಲಿ ರಾಹುಲ್ ಗಾಂಧಿ ಸೇರಿದಂತೆ ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಇದನ್ನು ಕಾಂಗ್ರೆಸ್ಸಿಗರು ಅರ್ಥ ಮಾಡಿಕೊಳ್ಳಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ಅನರ್ಹತೆ ಆಕ್ಷೇಪಿಸಿ ಕಾಂಗ್ರೆಸ್ಸಿಗರು ನಡೆಸುತ್ತಿರುವ ಪ್ರತಿಭಟನೆ ಬಗ್ಗೆ ದೆಹಲಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ರಾಹುಲ್ ಗಾಂಧಿ ಮತ್ತು ಅವರ ಪಕ್ಷದವರು ಕಾನೂನು ಹಾಗೂ ನ್ಯಾಯಾಂಗಕ್ಕಿAತ ದೊಡ್ಡವರು ಎಂದು ಭಾವಿಸಿದ್ದಾರೆ. ಭಾರತದ ಪ್ರಜಾಪ್ರಭುತ್ವವನ್ನು ಅವರು ಗೌರವಿಸುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.
ಯಾರ ವಿರುದ್ಧ ಕಾಂಗ್ರೆಸ್ ಧರಣಿ ಮಾಡುತ್ತಿದೆ? ಎಂದು ಪ್ರಶ್ನಿಸಿದ ಅವರು, ರಾಹುಲ್ ಗಾಂಧಿ ಅವರು ಓಬಿಸಿ ಸಮುದಾಯವನ್ನು ಅವಮಾನಿಸಿದರು. ಕ್ಷಮೆ ಕೇಳುವ ಅವಕಾಶವಿದ್ದರೂ ಅವರು ಆ ಕೆಲಸ ಮಾಡಲಿಲ್ಲ. ಈಗ ಅವರ ಪಕ್ಷ ನ್ಯಾಯಾಂಗದ ವಿರುದ್ಧ ಪ್ರತಿಭಟನೆ ಮಾಡುತ್ತಿದೆ ಎಂದು ಜೋಶಿ ಹೇಳಿದರು.

Previous articleಜಿಪಂ ಕಚೇರಿಯಲ್ಲಿ ಬೆಂಕಿ: ದಸ್ತಾವೇಜುಗಳು ಅಗ್ನಿಗೆ ಆಹುತಿ
Next articleಪಿಎಸ್ಐ ಹಗರಣದಲ್ಲಿ ವಿಚಾರಣೆ ಎದುರಿಸಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣು