ಕಾಫಿನಾಡಿನಲ್ಲಿ ಯುವಕ ಯುವತಿಯ ನಿಗೂಡ ಸಾವು

0
32

ಯುವತಿಯ ಮೃತದೇಹ ಕಾರಿನೊಳಗೆ, ಯುವಕನ ಶವ ಪಕ್ಕದ ಮರದಲ್ಲಿ ನೇಣು ಬಿಗಿದ ರೀತಿಯಲ್ಲಿ ಪತ್ತೆ

ಚಿಕ್ಕಮಗಳೂರು: ನಗರದ ಹೊರವಲಯದಲ್ಲಿ ಯುವಕ ಹಾಗೂ ಯುವತಿಯ ಶವಗಳು ಅನುಮಾನಾಸ್ಪದವಾಗಿ ಪತ್ತೆಯಾಗಿವೆ.
ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಮೂಲದ ಯುವಕ ಹಾಗೂ ಯುವತಿಯ ಶವಗಳು ಪತ್ತೆಯಾಗಿದ್ದು, ಯುವತಿ ಕಾರಿನಲ್ಲಿ ಸಾವನ್ನಪ್ಪಿದ್ದಾಳೆ. ಯುವತಿ ಕಾರು ನಿಂತ ಜಾಗದ ಪಕ್ಕದ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾನೆ.
ಬೆಂಗಳೂರಿನಿಂದ ಯೆಲ್ಲೋ ಬೋರ್ಡ್ ಕಾರಿನಲ್ಲಿ ಚಿಕ್ಕಮಗಳೂರಿಗೆ ಬಂದಿದ್ದಾರೆ ಎನ್ನಲಾಗಿದ್ದು, ಯುವತಿಯ ಕುತ್ತಿಗೆಯಲ್ಲಿ ಕತ್ತು ಹಿಸುಕಿರುವ ಗುರುತು ಇದೆ. ಆತ ಕಾರು ನಿಂತ ಜಾಗದ ಪಕ್ಕದ ಮರಕ್ಕೆ ವೇಲ್ ನಿಂದ ನೇಣು ಹಾಕಿಕೊಂಡಿದ್ದಾನೆ. ಆತ ನೇಣು ಹಾಕಿಕೊಂಡಿರುವ ಜಾಗ ಕೂಡ ಒಂದು ರೀತಿ ಅನುಮಾನಾಸ್ಪದವಾಗಿದೆ. ವೇಲ್ ಕುಣಿಕೆಗೆ ಕೊರಳೊಡ್ಡಿ ಜಿಗಿದರೆ ವೇಲ್ ತುಂಡಾಗುವ ಸಾಧ್ಯತೆಯೂ ಇದೆ. ಆದರೆ ಆತನ ಶವ ನೇತಾಡುತ್ತಿತ್ತು. ಕಾರು ಕೂಡ ರಸ್ತೆಯಲ್ಲಿ ನಿಂತಿಲ್ಲ. ರಸ್ತೆ ಬದಿಯ ಪಕ್ಕದ ಚರಂಡಿಗೆ ಇಳಿದಿದೆ, ಮೃತದೇಹಗಳನ್ನು ಚಿಕ್ಕಮಗಳೂರು ಸರಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದು, ಶವಪರೀಕ್ಷೆ ನಡೆಸಲು ಸಿದ್ಧತೆ ನಡೆದಿದೆ. ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

Previous articleಅಂಕ ಮುಖ್ಯವಲ್ಲ, ಫಲಿತಾಂಶದಿಂದ ಬಂದ ಜ್ಞಾನ ಮುಖ್ಯ
Next article20 ತಿಂಗಳುಗಳಲ್ಲಿ ಗುದ್ದಲಿ ಪೂಜೆ ಮಾಡಿಲ್ಲ