ದಾವಣಗೆರೆ: ರಾಸಲೀಲೆ ಪ್ರಕರಣದ ಆರೋಪಿ ಅಮ್ಚದ್‌ಗೆ ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಗಲ್ಲುಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಶ್ರೀರಾಮಸೇನೆಯಿಂದ ಫೆ. ೬ರಂದು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷ ಪ್ರಮೋದ್ ಮುತಾಲಿಕ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ. ೬ರಂದು ರಾಜ್ಯಾದ್ಯಂತ ಹಮ್ಮಿಕೊಂಡಿರುವ ಪ್ರತಿಭಟನೆಯು ದಾವಣಗೆರೆಯ ಜಿಲ್ಲಾಡಳಿತ ಮುಂಭಾಗ ಬೆಳಗ್ಗೆ ೧೧ಕ್ಕೆ ನಡೆಯಲಿದೆ ಎಂದು ತಿಳಿಸಿದರು.
ಅಮ್ಜದ್ ಎನ್ನುವ ಕಾಮುಕನು ಚನ್ನಗಿರಿಯಲ್ಲಿ ಮೆಡಿಕಲ್ ಶಾಪ್ ತೆರೆದು ಅಲ್ಲಿಗೆ ಬರುವ ಮಹಿಳೆಯರು, ವಿದ್ಯಾರ್ಥಿನಿಯರಿಗೆ ಉಚಿತವಾಗಿ ಔಷಧಿ ಮತ್ತು ಹಣದ ಸಹಾಯ ಮಾಡುವ ನೆಪದಲ್ಲಿ ಅವರನ್ನು ಲೈಂಗಿಕವಾಗಿ ಬಳಸಿಕೊಂಡು, ಅವರೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ 30ಕ್ಕೂ ಅಧಿಕ ವೀಡಿಯೋಗಳು ಅವನ ಮೊಬೈಲ್ ಮತ್ತು ಲ್ಯಾಪ್‌ಟಾಪ್‌ನಲ್ಲಿ ಇಟ್ಟುಕೊಂಡಿದ್ದಾನೆ. ಇಂಥ ಕಾಮುಕನಿಗೆ ಜಾಮೀನು ರಹಿತ ಬಂಧನ ಮಾಡಿ, ಪ್ರಕರಣ ವನ್ನು ತ್ವರಿತಗತಿಯಲ್ಲಿ ವಿಚಾರಣೆ ನಡೆಸಿ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವ ಮೂಲಕ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು.
ಪ್ರಕರಣ ಖಂಡಿಸಿ ಫೆ. 3ರಂದು ಚನ್ನಗಿರಿ ಬಂದ್‌ಗೆ ಕರೆ ನೀಡಲಾಗಿದ್ದು, ಅಂದು ಅಮ್ಜದ್ ಪ್ರತಿಕೃತಿ ದಹಿಸಿ ಪ್ರತಿಭ ಟನೆ ನಡೆಸಲಾಗುವುದು ಎಂದರು.