Home ಅಪರಾಧ ಕಾರಾಗೃಹದಲ್ಲೇ ಕೈದಿ ಆತ್ಮಹತ್ಯೆ

ಕಾರಾಗೃಹದಲ್ಲೇ ಕೈದಿ ಆತ್ಮಹತ್ಯೆ

0

ಧಾರವಾಡ: ಇಲ್ಲಿನ ಕೇಂದ್ರಿಯ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಮಧ್ಯಾಹ್ನ ಜರುಗಿದೆ.
ಗದಗ ಜಿಲ್ಲೆ ರೋಣ ತಾಲೂಕು ಸಂದಿಗವಾಡದ ಬಸವರಾಜ ಬನಪ್ಪ ಹೊಸೂರ(೪೭) ಆತ್ಮಹತ್ಯೆ ಮಾಡಿಕೊಂಡ ಕೈದಿ. ಈತ ಜೋಡಿ ಕೊಲೆ ಆರೋಪಕ್ಕಾಗಿ ಶಿಕ್ಷೆ ಅನುಭವಿಸುತ್ತಿದ್ದನು.
೨೦೧೩ರಲ್ಲಿ ನಡೆದ ಜೋಡಿ ಕೊಲೆಯ ಪ್ರಕರಣದಲ್ಲಿ ಜೈಲು ಸೇರಿದ್ದ ಈತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಕೈದಿ. ಭಾನುವಾರ ದನದ ಕೊಟ್ಟಿಗೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ ಮರಣೋತ್ತರ ಪರೀಕ್ಷೆ ನಡೆಸಿದ್ದು, ಈ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version