Home ಅಪರಾಧ ಕಾರಿನ ಮೇಲೆ ಕಂಟೇನರ್​ ಪಲ್ಟಿ: ಒಂದೇ ಕುಟುಂಬದ 6 ಮಂದಿ ಸಾವು

ಕಾರಿನ ಮೇಲೆ ಕಂಟೇನರ್​ ಪಲ್ಟಿ: ಒಂದೇ ಕುಟುಂಬದ 6 ಮಂದಿ ಸಾವು

0

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನ ಮೇಲೆ ಕಂಟೇನರ್​ ಉರುಳಿ ಬಿದ್ದು 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಂಟೇನರ್‌ ಚಾಲಕನ ನಿಯಂತ್ರಣ ತಪ್ಪಿ ಲಾರಿ ಕಾರಿನ ಮೇಲೆ ಪಲ್ಟಿಯಾಗಿದೆ. ಸ್ಥಳಕ್ಕೆ ನಲಮಂಗಲ ಟ್ರಾಫಿಕ್ ಪೊಲೀಸರು ಆಗಮಿಸಿದ್ದಾರೆ. ಬೆಂಗಳೂರು ಗ್ರಾಮಾಂತರ SP ಸಿ.ಕೆ ಬಾಬಾ ಸೇರಿದಂತೆ ಇತರೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಸಾರ್ವಜನಿಕರ ನೆರವಿನಿಂದ ಹರಸಾಹಸಪಟ್ಟು ಕಾರಿನಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮೃತರ ವಿವರ ಲಭ್ಯವಾಗಿಲ್ಲ. ಕಾರಿನಲ್ಲಿ ವಿಜಯಪುರ ಮೂಲದವರು ಎಂದು ಹೇಳಲಾಗಿದೆ.

Exit mobile version