Home Advertisement
Home ಅಪರಾಧ ಕಾರುಗಳ ಮುಖಾಮುಖಿ ಡಿಕ್ಕಿ: ಮೂವರು ಸಾವು

ಕಾರುಗಳ ಮುಖಾಮುಖಿ ಡಿಕ್ಕಿ: ಮೂವರು ಸಾವು

0
49

ಬೆಳಗಾವಿ: ಯರಗಟ್ಟಿ ತಾಲೂಕಿನ ಕುರಬಗಟ್ಟಿ ಕ್ರಾಸ್ ಬಳಿ ಸ್ವಿಫ್ಟ್ ಮತ್ತು ಅಲ್ಟೋ ಕಾರು ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ.
ಮೃತರನ್ನು ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದ ಮುತ್ತು ನಾಯಕ್(೮), ಗೋಪಾಲ್ ನಾಯಕ್(೪೫) ಹಾಗೂ ಧಾರವಾಡದ ಅನ್ನಪೂರ್ಣ(೫೩) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತೀವ್ರ ಗಾಯಗೊಂಡಿರುವ ಮತ್ತಿಬ್ಬರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುರಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಾಹಿತಿ ಸಿಗುತ್ತಿದ್ದಂತೆಯೇ ಮುರಗೋಡು ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.

Previous articleಕವಿವಿಯಲ್ಲಿ ವಾಮಾಚಾರ ಪ್ರಕರಣ: ಮಹಿಳಾ ಆಯೋಗ ಸೂಚನೆ
Next articleಅಯೋಧ್ಯೆ ರೈಲಿಗೆ ಬೆಂಕಿ ಹಚ್ಚುವದಾಗಿ ಬೆದರಿಕೆ: ಓರ್ವನ ವಶಕ್ಕೆ ಪಡೆದ ಪೊಲೀಸರು