ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿ ಓರ್ವ ಸಾವು: ಮೂವರಿಗೆ ಗಂಭೀರ ಗಾಯ..!

0
7

ಧಾರವಾಡ : ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ಅಮ್ಮಿನಭಾವಿ ಗ್ರಾಮದ ಬಳಿಯ ಸವದತ್ತಿ ರಸ್ತೆಯಲ್ಲಿ ನಡೆದಿದೆ.

ಸವದತ್ತಿ ಕಡೆಯಿಂದ ಧಾರವಾಡ ಕಡೆಗೆ ಬರುತ್ತಿದ್ದ ಕಾರು ಸವದತ್ತಿ ಕಡೆಗೆ ಹೋಗುವ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಸವದತ್ತಿ ಯಲ್ಲಮ್ಮ ದೇವಿಯ ದರ್ಶನಕ್ಕೆ ಹೊರಟ್ಟಿದ ಟ್ರ್ಯಾಕ್ಟರ್ ನಲ್ಲಿ ಪ್ರಯಾಣಿಕರು ಗಾಯಗೊಂಡಿದ್ದು, ಮೂವರಿಗೆ ಗಂಭೀರವಾದ ಗಾಯವಾಗಿದೆ.

ಗಾಯಾಳುಗಳನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಘಟನೆ ಕುರಿತು ಮಾಹಿತಿ ಕಲೆ ಹಾಕಿದ್ದಾರೆ.

Previous articleದೇವತಾ ಶಕ್ತಿಗಳ ಪ್ರೇರಣೆಯಿಂದ ಶುದ್ಧಿ
Next articleಕಾರು ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿ ಓರ್ವ ಸಾವು; ಮೂವರಿಗೆ ಗಂಭೀರ ಗಾಯ