ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಕ್ರಾಸ್ ಬಳಿ ಕಾರು-ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಶ್ವೇತ (29), ಅಂಜಲಿ(26), ಸಂದೀಪ್ (26),
ವಿಠಲ್ (55) ಹಾಗೂ ಶಶಿಕಲಾ (40) ಮೃತ ದುರ್ದೈವಿಗಳು. ಮೃತರೆಲ್ಲರೂ ಶಿವಮೊಗ್ಗ ಜಿಲ್ಲೆಯ ಸಾಗರದವರು ಎಂದು ಗುರುತಿಸಲಾಗಿದೆ.
ಹೋಟೆಲ್ ವ್ಯಾಪಾರಕ್ಕೆಂದು ಬಾಗಲಕೋಟೆಗೆ ತೆರಳುತ್ತಿದ್ದರು ಎಂದು ಗ್ರಾಮೀಣ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.