Home ನಮ್ಮ ಜಿಲ್ಲೆ ಉಡುಪಿ ಕಾರ್ಕಳ ಸುಡುಮದ್ದು ಘಟಕದಲ್ಲಿ ಅವಘಡ: ಈರ್ವರು ಮಹಿಳೆಯರಿಗೆ ಗಾಯ

ಕಾರ್ಕಳ ಸುಡುಮದ್ದು ಘಟಕದಲ್ಲಿ ಅವಘಡ: ಈರ್ವರು ಮಹಿಳೆಯರಿಗೆ ಗಾಯ

0

ಉಡುಪಿ: ಕಾರ್ಕಳ ಹಿಮ್ಮುಂಜೆ ಕಾಜೆ ಎಂಬಲ್ಲಿ ಕಾರ್ಯಾಚರಿಸುತ್ತಿರುವ ಸುಡುಮದ್ದು ತಯಾರಿಕಾ ಘಟಕದಲ್ಲಿ ಪಟಾಕಿ ಸಿಡಿದು ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಬುಧವಾರ ಸಂಭವಿಸಿದೆ.
ತಾಲೂಕಿನ ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಾಜೆ ಎಂಬಲ್ಲಿ ನಡೆದಿದೆ.
ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ಕಳೆದ ಕೆಲವು ವರ್ಷಗಳಿಂದ ಸುಡುಮದ್ದು ತಯಾರಿಕಾ ಘಟಕ ಕಾರ್ಯಾಚರಿಸುತ್ತಿದ್ದು ಎಂದಿನಂತೆ ಇಂದು ಬೆಳಿಗ್ಗೆ ಸುಡುಮದ್ದು ತಯಾರಿಕೆ ಸಂದರ್ಭ ಅನಿರೀಕ್ಷಿತವಾಗಿ ಸ್ಫೋಟಗೊಂಡು ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯರಿಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಸುಡುಮದ್ದು ತಯಾರಿಕಾ ಘಟಕದಲ್ಲಿ 3 ಬೇರೆ ಬೇರೆ ಕಟ್ಟಡಗಳಿದ್ದು ಒಂದು ಕಟ್ಟಡದಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟ ಸಂದರ್ಭ ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯರು ಗಾಯಗೊಂಡಿದ್ದರೆ, ಕಟ್ಟಡದ ಮೇಲ್ಛಾವಣಿ ಹೊತ್ತಿ ಉರಿದಿದ್ದು ಕಟ್ಟಡ ಸಂಪೂರ್ಣ ಹಾನಿಗೊಂಡಿದೆ. ಸ್ಫೋಟಕ್ಕೆ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ.

Exit mobile version