Home ತಾಜಾ ಸುದ್ದಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ: ನಾಲ್ವರು ಸಾವು ಹಲವರಿಗೆ ಗಾಯ

ಕಾರ್ಖಾನೆಯಲ್ಲಿ ಭಾರೀ ಸ್ಫೋಟ: ನಾಲ್ವರು ಸಾವು ಹಲವರಿಗೆ ಗಾಯ

0

ಮುಂಬೈ: ರಾಸಾಯನಿಕ ಕಂಪನಿಯಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 34 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಸಮೀಪದ ಥಾಣೆಯ ಡೊಂಬಿವಾಲಿಯಲ್ಲಿರುವ ಕಾರ್ಖಾನೆಯೊಂದರಲ್ಲಿ ಗುರುವಾರ ಭಾರೀ ಸ್ಫೋಟ ಸಂಭವಿಸಿದ ನಂತರ ಬೆಂಕಿ ಕಾಣಿಸಿಕೊಂಡಿದ್ದು, ಹಲವಾರು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಎಂಐಡಿಸಿ 2ನೇ ಹಂತದಲ್ಲಿರುವ ರಾಸಾಯನಿಕ ಕಾರ್ಖಾನೆಯೊಳಗಿನ ಬಾಯ್ಲರ್ ಸ್ಫೋಟಗೊಂಡ ನಂತರ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Exit mobile version