ಆಲಮಟ್ಟಿ: ಮುಳವಾಡ ಏತ ನೀರಾವರಿಗೆ ಸಂಬಂಧಿಸಿದ ಬಸವನ ಬಾಗೇವಾಡಿ ಶಾಖಾ ಕಾಲುವೆ ಹಾಗೂ ಕುದರಿ ಸಾಲವಾಡಗಿ ಮುಖ್ಯ ಕಾಲುವೆಗೆ ನೀರು ಹರಿಸಿ ಕೆರೆಗಳನ್ನು ಭರ್ತಿ ಮಾಡುವಂತೆ ರೈತ ಸಂಘ ಒತ್ತಾಯಿಸಿ ದಿ. 27ರಂದು ಧರಣಿ ಹಮ್ಮಿಕೊಳ್ಳಲಿದೆ.
ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಅನುಕೂಲತೆ ಕಲ್ಪಿಸಲು ಗುರುವಾರದಂದು ಆಲಮಟ್ಟಿಯ ಕೃಷ್ಣಾ ಭಾಗ್ಯ ಜಲ ನಿಗಮದ ಮುಖ್ಯ ಅಭಿಯಂತರರ ಕಚೇರಿಯ ಮುಂಭಾಗದಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಅಂದು ಬೆಳಗ್ಗೆ 11ಕ್ಕೆ ಸ್ಥಳೀಯ ರಾಮಲಿಂಗೇಶ್ವರ ದೇವಸ್ಥಾನದಿಂದ ಮೇರವಣಿಗೆ ಹೊರಟು ಸಿಇ ಕಚೇರಿಗೆ ತಲುಪಿ ಧರಣಿ ಸತ್ಯಾಗ್ರಹ ಆರಂಭಿಸಲಾಗುವದೆಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹಾಗೂ ರೈತ ಮುಖಂಡ ವಿಠ್ಠಲ ಬಿರಾದಾರ ಬಸವನ ಬಾಗೇವಾಡಿ ತಾಲೂಕಾ ಅಧ್ಯಕ್ಷ ಉಮೇಶ ವಾಲಿಕಾರ ಜಂಟಿ ಪತ್ರಿಕಾ ಹೇಳಿಕೆ ನೀಡಿದ್ದಾರೆ.