Home Advertisement
Home ಅಪರಾಧ ಕಾಲೇಜು ವಿದ್ಯಾರ್ಥಿನಿಯ ಕತ್ತು ಕೊಯ್ದು ಬರ್ಬರ ಹತ್ಯೆ: ಓರ್ವನ ಬಂಧನ

ಕಾಲೇಜು ವಿದ್ಯಾರ್ಥಿನಿಯ ಕತ್ತು ಕೊಯ್ದು ಬರ್ಬರ ಹತ್ಯೆ: ಓರ್ವನ ಬಂಧನ

0
177

ಹಾಡಹಗಲೇ ನಡುರಸ್ತೆಯಲ್ಲಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ

ರಾಯಚೂರು: ಕಾಲೇಜ್‌ ವಿದ್ಯಾರ್ಥಿನಿಯನ್ನು ಕರೆದೊಯ್ದು ಕತ್ತು ಕೊಯ್ದು ಕೊಲೆ ಮಾಡಿದ ಘಟನೆ ನಡೆದಿದೆ.
ಜಿಲ್ಲೆಯ ಸಿಂಧನೂರಿನ ಹೊರ ಭಾಗದಲ್ಲಿ ಈ ಘಟನೆ ನಡೆದಿದೆ. ಸಿಂಧನೂರು ಸರ್ಕಾರಿ ಕಾಲೇಜಿನಲ್ಲಿ ಎಂಎಸ್​ಸಿ ಓದುತ್ತಿದ್ದ ಶಿಫಾ (22) ಮೃತ ವಿದ್ಯಾರ್ಥಿನಿ. ಹಾಡಹಗಲೇ ನಡುರಸ್ತೆಯಲ್ಲಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಮುಬಿನ್​ ಅನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಸಿಂಧನೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿದ್ಯಾರ್ಥಿನಿ ಶಿಫಾ ಎಂದಿನಂತೆ ಬೆಳಗ್ಗೆ ಲಿಂಗಸೂಗೂರಿನಿಂದ ಸಿಂಧನೂರಿನ ಕಾಲೇಜಿಗೆ ಬರುತ್ತಿದ್ದ ಸಂದರ್ಭ ಲಿಂಗಸೂಗೂರಿನಿಂದ ಬೈಕ್‌ನಲ್ಲಿ ಆಗಮಿಸಿದ್ದ ಪರಿಚಿತ ಯುವಕ, ಮಾತನಾಡುವುದಿದೆ ಬಾ ಎಂದು ಖಾಸಗಿ ಲೇಔಟ್‌ಗೆ ಕರೆದುಕೊಂಡು ಹೋಗಿದ್ದಾನೆ. ದಿಢೀರ್ ಚಾಕು ತೆಗೆದು ಕತ್ತು ಕೊಯ್ದಿದ್ದಾನೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಬಿ.ಎಸ್. ತಳವಾರ, ಸಿಪಿಐ ವೀರಾರೆಡ್ಡಿ, ಪಿಎಸ್ ಐಗಳಾದ ಯರಿಯಪ್ಪ, ಸುಜಾತ, ಬಸವರಾಜ ಸೇರಿದಂತೆ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ, ತನಿಖೆ ಕೈಗೊಂಡಿದ್ದಾರೆ.

Previous articleಬಿಗ್ ಬಾಸ್ ವಿನ್ನರ್ ಹನುಮಂತಗೆ ಅದ್ಧೂರಿ ಸ್ವಾಗತ
Next articleವಕ್ಫ್ ತಿದ್ದುಪಡಿ ಮಸೂದೆ: ಲೋಕಸಭೆ ಸ್ಪೀಕರ್‌ಗೆ ಜೆಪಿಸಿ ವರದಿ ಸಲ್ಲಿಕೆ