ಕಾಲ್ತುಳಿತಕ್ಕೆ ಬಲಿಯಾಗಿರುವುದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ

ಬೆಂಗಳೂರು: ಬದುಕಿ ಬಾಳಬೇಕಿದ್ದ ನಮ್ಮ ಮನೆಯ ಮಕ್ಕಳು ಕಾಲ್ತುಳಿತಕ್ಕೆ ಬಲಿಯಾಗಿರುವುದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಹೇಳಿದ್ದಾರೆ.
ಆರ್‌ಸಿಬಿ ಗೆಲುವಿನ ಕಾರ್ಯಕ್ರಮದ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದ ಬಗ್ಗೆ ಮಾಧ್ಯಮಗಳನ್ನುದ್ದೇಶಿಸಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ ನಮ್ಮ ರಾಜ್ಯದಲ್ಲಿ ಇಂತಹ ದುರ್ಘಟನೆ ನಡೆಯುತ್ತದೆ ಎಂದು ನಾವ್ಯಾರೂ ನಿರೀಕ್ಷೆ ಮಾಡಿರಲಿಲ್ಲ. ಈ ದುರ್ಘಟನೆಯಿಂದ ಜೀವಹಾನಿಯಾಗಿದೆ. ಬೆಂಗಳೂರು ಹಾಗೂ ಕರ್ನಾಟಕ ರಾಜ್ಯದ ಘನತೆಗೆ ಧಕ್ಕೆಯಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಮಾಡಿ ಲೋಪದೋಷ ಸರಿಪಡಿಸಲಾಗುವುದು. ಇದರಿಂದ ನಾವು ಪಾಠವನ್ನು ಕಲಿಯಬೇಕಿದೆ. ಈ ದುರ್ಘಟನೆ ನಡೆದಿರುವುದು ನಮ್ಮ ಕುಟುಂಬದಲ್ಲೇ ಎಂದು ಭಾವಿಸಿದ್ದೇವೆ. ದುರ್ಘಟನೆಯಲ್ಲಿ ಮೃತಪಟ್ಟವರು ನಮ್ಮ ಮನೆಯವರೇ ಮೃತಪಟ್ಟಿದ್ದಾರೆ ಎಂಬ ನೋವು ರಾಜ್ಯದಲ್ಲಿ ತುಂಬಿದೆ. ಈ ನೋವನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಸತ್ತವರು ನಮ್ಮ ಕುಟುಂಬದ ಸದಸ್ಯರು. ಈ ಪರಿಸ್ಥಿತಿಯಲ್ಲಿ ನಾವು ಸಂತಾಪ ಸೂಚಿಸಬೇಕು. ರಾಜಕೀಯ ಮಾಡಬಾರದು.